87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈಗ ಡಿಸೆಂಬರ್ 20,21 ರಂದು ಮಂಡ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಡಿಸೆಂಬರ್ 20ರಿಂದ ಮೂರು ದಿನ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಬಹುದು ಎಂಬುದು ಭಾರೀ ಕುತೂಹಲ ಮೂಡಿಸಿತ್ತು. ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಹಿಂದೆಂದಿಗಿಂತಲೂ ಅದ್ಧೂರಿಯಾಗಿ, 20 ಕೋಟಿ ರೂ ವೆಚ್ಚದಲ್ಲಿ ಸಿಎಂ ತವರೂರು ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.