Karataka Damanaka Movie Review : ಶಿವರಾತ್ರಿ ದಿನವೇ ಶಿವಣ್ಣ ಎಲ್ಲರ ಮನೆ ಮತ್ತು ಮನಸ್ಸುಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾದ್ರೆ ಟೈಟಲ್ ಮೂಲಕ ಸದ್ದು ಮಾಡಿದ ಕರಟಕ ದಮನಕ ಸಿನಿಮಾ ಹೇಗಿದೆ ಗೊತ್ತಾ..?
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
ಕರನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ "ಕರಟಕ ದಮನಕ" ಚಿತ್ರದ ಎರಡನೇ ಗೀತೆ "ಡೀಗ ಡಿಗರಿ" ಅಬುದಾಬಿಯಲ್ಲಿ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.
ಶಿವರಾಜಕುಮಾರ್, ಪ್ರಭುದೇವ, ಯೋಗರಾಜ್ ಭಟ್, ರಾಕ್ ಲೈನ್ ವೆಂಕಟೇಶ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಲ್ಲಿನ ಸಹಸ್ರಾರು ಕನ್ನಡಿಗರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಹಾಡು ಬಿಡುಗಡೆಗೂ ಮುನ್ನ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.
Karataka Damanaka: ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದರು.
ಕರಟಕ ದಮನಕ ಚಿತ್ರ, ಚಿತ್ರದ ಪಾತ್ರಗಳ ಬಗ್ಗೆ ನಿರ್ದೇಶಕ ಯೋಗರಾಜ ಭಟ್ ವಿವರಿಸಿದ್ದಾರೆ. ಅಲ್ಲದೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ ಎಲ್ಲರೂ ಈ ಚಿತ್ರದ ಬಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
Karataka Damanaka Movie: ಯೋಗರಾಜ್ ಭಟ್ ನಿರ್ದೇಶನದ ಮತ್ತು ರಾಕ್ಲೈನ್ ವೆಂಕಟೇಶ್ ನಿರ್ಮಾಣದ ʻಕರಟಕ ದಮನಕʼ ಸಿನಿಮಾದಲ್ಲಿ ಶಿವರಾಜ್ಕುಮಾರ್ ಮತ್ತು ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ.
Karataka Damanaka Kannada film: ಬೆಂಗಳೂರು ಗ್ರಾಮಾಂತರ, ಕೋಲಾರ, ಗೌರಿಬಿದನೂರು ಹಾಗೂ ಉತ್ತರ ಕರ್ನಾಟಕದಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.