Karnataka Assembly Elections: ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ.
‘ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಮದನ್ ದಿಲಾವರ್ ಹೇಳಿಕೆ ಪ್ರಕಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ 80 ವರ್ಷವಾಗಿದ್ದು, ದೇವರು ಆತನನ್ನು ಯಾವಾಗಬೇಕಾದರೂ ಕರೆಸಿಕೊಳ್ಳಬಹುದು’ ಎಂದಿದ್ದಾರೆ. ಆ ಮೂಲಕ ದಲಿತ ಸಮುದಾಯದ ಶ್ರೇಷ್ಠ ನಾಯಕನ ವಿರುದ್ಧ ಬಿಜೆಪಿಯ ದ್ವೇಷ ಮನೋಭಾವ ಎದ್ದು ಕಾಣುತ್ತಿದೆ. ಬಿಜೆಪಿ ನಾಯಕರು ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗ್ರಹಿಸಿದ್ದಾರೆ.
ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಡಬಲ್ ಎಂಜಿನ್ ಸರ್ಕಾರದ ಎಲ್ಲ ಎಂಜಿನ್ ಗಳು ವಿಫಲವಾಗಿದೆ. ಜನಬೆಂಬಲವಿದ್ದಲ್ಲಿ ಮಾತ್ರ ಬೊಮ್ಮಾಯಿ ಮುಖ್ಯಮಂತ್ರಿಯಾಗಲು ಸಾಧ್ಯ. ಇಲ್ಲಿಯೇನು ಶಾ ಮತ್ತು ಮೋದಿ ಅವರು ಇಲ್ಲಿ ಬಂದು ಮುಖ್ಯಮಂತ್ರಿ ಆಗ್ತಾರ? ಇಲ್ಲಿನ ಜನನೇ ಮುಖ್ಯಮಂತ್ರಿ ಆಗೋದು. ನಮ್ಮ ಜನಕ್ಕೆ ಏನೂ ಮಾಡದ ಮೋದಿಯವರ ಬಿಜೆಪಿಗೆ ತಕ್ಕ ಪಾಠ ಕಲಿಸಿ. ಜನ ಅವರನ್ನು ಧಿಕ್ಕರಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಂಜೆ ಕಲಬುರಗಿಯಲ್ಲಿ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
ಮತಗಟ್ಟೆ ಎಲ್ಲಿದೆ ಎಂಬುದನ್ನು ತಿಳಿಯುವ ಮತ್ತು ಮೇ 10ರಂದು ತಪ್ಪದೇ ಮತದಾನ ಮಾಡಬೇಕು ಎನ್ನುವ ಸಂದೇಶದ ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮವು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಸಹ ಏಪ್ರೀಲ್ 30ರಂದು ಯಶಸ್ವಿಯಾಗಿ ನಡೆಯಿತು.
ಬಿಜೆಪಿ ಆಡಳಿತ ಸಾಧನೆ ಶೂನ್ಯ. ರಾಜ್ಯದಲ್ಲಿ 40% ಕಮಿಷನ್ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಈ ಹೆಸರು ಕೊಟ್ಟಿದ್ದು ನಾನಲ್ಲ. ಈ ಸರ್ಕಾರದಲ್ಲಿ ಒಬ್ಬ ಸಚಿವ ಲಂಚಕ್ಕೆ ಹೋದರೆ, ಮತ್ತೊಬ್ಬ ಸಚಿವ ಮಂಚಕ್ಕೆ ಹೋದ. ಈಗ ಅವರೇ ಅವರ ಮುತ್ತುರತ್ನಗಳು. ಈ 40% ಕಮಿಷನ್ ಸರ್ಕಾರ ಕಿತ್ತೊಗೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ‘’ಜನತಾ ಪ್ರಣಾಳಿಕೆ’’ ಎಂದು ಕರೆದಿರುವುದು ಅರ್ಥಪೂರ್ಣವಾಗಿದೆ.ಈ ಪ್ರಣಾಳಿಕೆಯನ್ನು ಜನತೆಯೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ ಎನ್ನುವದೇ ಇದರ ಅರ್ಥವಾಗಿದೆ.
Karnataka assembly elections: ಐತಿಹಾಸಿಕ ನಗರ ಮೈಸೂರಿಗೆ ಟೂರಿಸಂ ಸರ್ಕೀಟ್ ಮಾಡಿ ಮೈಸೂರನ್ನು ಅಂತರಾಷ್ಟ್ರೀಯ ಭೂಪಟದಲ್ಲಿ ತೆಗೆದುಕೊಂಡು ಹೋಗಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ಇದು ಈಡೇರಬೇಕಾದ್ರೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Priyanka Gandhi: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ.ಮೈಸೂರು-ಚಾಮರಾಜನಗರದಲ್ಲಿ ಮತಯಾಚನೆ ಮುಗಿಸಿದ್ದು, ಇದೀಗ ನಾಳೆ ಕೆಲವು ದೊಡ್ಡ ನಗರಗಳಲ್ಲಿ ಪ್ರಚಾರದಲ್ಲಿ ಭಾಗಿಯಲಿದ್ದಾರೆ.
ಲಿಂಗಾಯತರ ವಿಷಯದಲ್ಲಿ ಬಿಜೆಪಿ ಅವರು ಗಾಬಾರಿಗೊಂಡಿದ್ದಾರೆ. ರಾಜ್ಯದ ಬಿಜೆಪಿಯ ಯಾವುದೇ ನಾಯಕನ ಮುಖವನ್ನು ಇಟ್ಟು ಜನರ ಬಳಿಗೆ ಹೋಗಲಿಕ್ಕೆ ಆಗುತ್ತಿಲ್ಲ ಇವರಿಗೆ, ಮೋದಿ ಶಾ ಅವರನ್ನು ಕರ್ನಾಟಕದ ಶಾಶ್ವತ ನಿವಾಸಿಗಳಾಗಿ ಬಿಟ್ಟಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಸೋಲಿನ ಹತಾಶೆಯಿಂದ ಕಾಂಗ್ರೆಸ್ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದೆ. ನರೇಂದ್ರ ಮೋದಿಯವರಿಗೆ ಪ್ರಿಯಾಂಕಾ ಖರ್ಗೆ ಅವರು ನಾಲಾಯಕ್ ಎಂದಿದ್ದಾರೆ. ಅವರನ್ನು ನೀವು ಕ್ಷಮಿಸುತ್ತಿರಾ? ಅವರಿಗೆ ತಕ್ಕ ಪಾಠವನ್ನು ಕಲಿಸಲು ಬಿಜೆಪಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.