ಗೃಹಸಚಿವ ಅಮಿತ್ ಶಾ ಅವರೇ, ಇದು ಕರ್ನಾಟಕ, ಇಲ್ಲಿ ಹೊಡೆಯುವ, ಬಡಿಯುವ, ಮುರಿಯುವ, ಸುಡುವ ‘ಗುಜರಾತ್ ಮಾದರಿ’ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ಪ್ರೀತಿಸುವ, ಪೊರೆಯುವ ಮತ್ತು ಕಟ್ಟುವ ‘ಕರ್ನಾಟಕ ಮಾದರಿ’ಯೇ ನಡೆಯುವುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ ಕುಟುಂಬದ 36 ಜನರಿಗೆ ಟಿಕೆಟ್ ನೀಡಿದ್ದಾರೆ. ಆದರೂ ಕಾಂಗ್ರೆಸ್ ವಿರುದ್ಧ ಪರಿವಾರವಾದದ ಬಗ್ಗೆ ಮಾತನಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಾವು ಸತ್ಯದ ಪರವಾಗಿ ಹೋರಾಟ ಮಾಡುತ್ತಿದ್ದು, ಭಗವಂತನ ಆಶೀರ್ವಾದ ನಮ್ಮ ಮೇಲಿದೆ. ಇನ್ನು ಕರ್ನಾಟಕದ ಚುನಾವಣೆ ಕೂಡ ಸತ್ಯದ ಪರವಾದ ಹೋರಾಟವಾಗಿದೆ. ಇಂದು ಬೆಳಗ್ಗೆ ಮೈಸೂರಿನ ಮೈಲಾರಿ ಹೊಟೇಲ್ ಗೆ ಹೋಗಿದ್ದೆ. ಅಲ್ಲಿ ಕರ್ನಾಟಕದ ಸ್ವಾಭಿಮಾನ, ಪರಿಶ್ರಮದ ದರ್ಶನವಾಯಿತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ ರೈತ ಮೋರ್ಚದ ಉಪಾಧ್ಯಕ್ಷರಾದ ರಾಮರೆಡ್ಡಿ, SC ಘಟಕದ ಉಪಾಧ್ಯಕ್ಷರಾದ ವಿಜಯ್, ಜಿಲ್ಲೆಯ ಪ್ರಮುಖರು ಸೇರಿದಂತೆ ನೂರಾರು ಸಂಖ್ಯೆಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ತತ್ವ ಸಿದ್ದಾಂತಕ್ಕೆ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬೇಷರಾತ್ತಾಗಿ ಸೇರ್ಪಡೆಗೊಂಡಿದ್ದಾರೆ.
Karnataka Assembly Elections 2023: ಬೆಂಗಳೂರಿನ ರಾಷ್ಟೋತ್ಥನ ಸಂಸ್ಥೆಯ ರಕ್ತ ನಿಧಿಯಲ್ಲಿ ತಿಂಗಳಿಗೆ ಸರಾಸರಿ 2 ಸಾವಿರಕ್ಕೂ ಹೆಚ್ಚು ಯುನಿಟ್ ರಕ್ತ ಸಂಗ್ರಹವಾಗುತ್ತಿತ್ತು, ಕಳೆದ ಒಂದು ತಿಂಗಳಿನಲ್ಲಿ ಈ ಸಂಖ್ಯೆ ಅರ್ಧಕ್ಕೆ ಅರ್ಧ ಕುಸಿದಿದೆ. ಕೇವಲ 900 ಯೂನಿಟ್ ರಕ್ತ ಸಂಗ್ರಹವಾಗಿದೆಯಂತೆ.
ಕನ್ನಡದ ಕತ್ತು ಹಿಚುಕಿ ಹಿಂದಿ ಹೇರುವ ನಿಮ್ಮ ಕಟುಕತನ, ನಮ್ಮ ಹಿರೀಕರು ಕಟ್ಟಿ ಬೆಳೆಸಿದ ಸಂಪತ್ತನ್ನು ಕಬಳಿಸುವ ನಿಮ್ಮ ವ್ಯಾಪಾರಿ ಬುದ್ದಿ ಮತ್ತು ಇಲ್ಲಿನ ರಾಜಕೀಯ ನಾಯಕತ್ವವನ್ನೇ ನಾಶ ಮಾಡಿ ನಮ್ಮ ಮೇಲೆ ಸವಾರಿ ಮಾಡುವ ನಿಮ್ಮ ಸರ್ವಾಧಿಕಾರಿ ಧೋರಣೆಯನ್ನು ಕನ್ನಡಿಗರು ಈಗ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ನಾ ಖಾವುಂಗಾ ನಾ ಖಾನೇ ದೂಂಗ ಇದು ಪ್ರಧಾನಿ ಮೋದಿ ಜೀ ಅವರ ಸ್ಲೋಗನ್ ಆಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಭ್ರಷ್ಟರಿಗೆ ಮಣೆ ಆಕ್ತಾ ಇದ್ದಾರೆ. ಮೋದಿ ಮತ್ತುಅಮಿತ್ ಶಾ ಅವರು ಈ ಭ್ರಷ್ಟಾಚಾರದ ಬಗ್ಗೆ ಯಾಕೆ ಮೌನವಾಗಿದ್ದಾರೆ. ಇಡಿ, ಸಿಬಿಐ , ಐಟಿ ಎಂಬ ಎಲ್ಲ ಅಸ್ತ್ರಗಳನ್ನು ಪ್ರಯೋಗಿಸುತ್ತಾರೆ. ಈ ತನಿಖಾ ಸಂಸ್ಥೆಗಳು ರಾಜ್ಯದಲ್ಲಿರುವ ಭ್ರಷ್ಟಾಚಾರದ ಕಡೆ ಯಾಕೆ ನೋಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಟೀಕಾ ಪ್ರಹಾರ ನಡೆಸಿದರು.
ಮೋದಿ ಅವರ ಆಶೀರ್ವಾದ ಬೇಕು ಎಂದು ಹೇಳಿರುವುದು ಈ ರಾಜ್ಯಕ್ಕೆ ಮಾಡಿರುವ ದೊಡ್ಡ ಅಪಮಾನ.ನಿಮ್ಮ ಆಲೋಚನೆ, ಪರಿಶ್ರಮದಿಂದ ಈ ರಾಜ್ಯ ನಿರ್ಮಾಣವಾಗಿದೆ. ನೀವು ಅದೆಷ್ಟು ಬಾರಿ ಅಸಾಧ್ಯವಾದುದನ್ನು ಸಾಧ್ಯ ಮಾಡಿದ್ದೇವೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು
Dog Predicts: ಕರ್ನಾಟಕದಲ್ಲಿ ಚುನಾವಣೆ ಅಖಾಡ ಜೋರಾಗಿ ನಡೆಯುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಪ್ರಕ್ರಿಯೆಯು ಮುಗಿದಿದೆ. ಹೀಗಿರುವಾಗ ಕರ್ನಾಟಕದ ಮುಂದಿನ ಸಿಎಂ ಯಾರೆಂದು ಕಾಲ ಬೈರವ ಸುಳಿವು ನೀಡಿದೆ.
ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಜ್ಯ ಸರ್ಕಾರದ ಎಲ್ಲಾ ಕೆಲಸಗಳನ್ನು ಪರೋಕ್ಷವಾಗಿ ನಿಯಂತ್ರಿಸಲಾಗುತ್ತಿದೆ. ಇದಕ್ಕೆ ಉದಾಹರಣೆ ತೆಲಂಗಾಣ ರಾಜ್ಯದ ರಾಜ್ಯಪಾಲರು ನಡೆದುಕೊಂಡಿರುವ ರೀತಿ ಎಂದು ಕಾಂಗ್ರೆಸ್ ವಕ್ತಾರ ಪಿ.ಆರ್.ರಮೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
‘ಸಮಾಜದಲ್ಲಿನ ಜಾತಿ ತಾರತಮ್ಯ, ಶೋಷಣೆ, ದಬ್ಬಾಳಿಕೆ, ಕಂದಾಚಾರಗಳನ್ನು ಕಂಡ ಬಸವಣ್ಣನವರು ಇದರ ಬಗ್ಗೆ ತಮ್ಮನ್ನು ತಾವೇ ಪ್ರಶ್ನೆ ಮಾಡಿಕೊಂಡು, ಯಾರಿಗೂ ಹೆದರದೇ ತಮ್ಮ ಮನಸ್ಸಿನಲ್ಲಿ ಬಂದ ಸತ್ಯವನ್ನು ಸಮಾಜಕ್ಕೆ ತಿಳಿಸಿದರು.
ದುರಾದೃಷ್ಟವಶಾತ್, ಬಸವರಾಜ ಬೊಮ್ಮಾಯಿ ಅವರು ಅವರದೇ ಪಕ್ಷ ಶಾಸಕ ನೆಹರೂ ಓಲೇಕರ್ ಅವರ ಪ್ರಕಾರ 40% ಕಮಿಷನ್ ಏಜೆಂಟ್ ಆಗಿದ್ದಾರೆ. ಈ ಆರೋಪ ನಾವು ಮಾಡಿಲ್ಲ. ನೆಹರೂ ಓಲೇಕರ್ ಹೇಳಿರುವುದನ್ನು ಸಿದ್ದರಾಮಯ್ಯ ಪುನರುಚ್ಛರಿಸಿದರೆ, ಅದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದರು.
ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ.ಅವರೊಬ್ಬ ಹಿರಿಯ ನಾಯಕ.ಆದರೆ ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ.ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೂ ರಾಷ್ಟ್ರೀಯ ಒಗ್ಗಟ್ಟನ್ನು, ಸಂವಿಧಾನದ ಆಧಾರದ ಮೇಲೆ ಒಟ್ಟಾಗಿ ತೆಗೆದುಕೊಂಡು ಹೋಗುವ ಮನಸ್ಥಿತಿ ಇಲ್ಲ. ಹಿಂದುತ್ವ, ಧರ್ಮಾಂಧತೆ, ಜಾತಿಗಳ ನಡುವೆ ಕಲಹ ಸೃಷ್ಟಿಸಿ, ಸಾಮಾಜಿಕ ಸಾಮರಸ್ಯ ನಾಶ ಮಾಡುತ್ತಾ ಬಂದಿದ್ದಾರೆ ಎಂದು ಮಾಜಿ ಸಚಿವ ಬಿ.ಸೋಮಶೇಖರ್ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.