‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ.ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೊಂದು ಕಣ್ಣಾಮುಚ್ಚಾಲೆಯ ಬೋಗಸ್ ಬಜೆಟ್.ಜನರನ್ನು ಹೇಗೆಲ್ಲಾ ದಾರಿ ತಪ್ಪಿಸಬಹುದು ಎಂಬುದರ ಬಗ್ಗೆ ಪಿಎಚ್.ಡಿ ಮಾಡಿ ಈ ಬಜೆಟ್ ರೂಪಿಸಿದಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಾ ಪ್ರಹಾರ ನಡೆಸಿದ್ದಾರೆ.
ಕರೋನಾ ನಡುವೆಯೂ ಸರ್ಕಾರ ಯಶಸ್ವಿಯಾಗಿ ಕೆಲಸ ಮಾಡಿದೆ. ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿಗೆ ಒತ್ತುನೀಡಿದೆ. ಡಾಕ್ಟರ್ಸ್, ಪೋಲೀಸರು , ಕಂದಾಯ, ನಗರಾಭಿವೃದ್ಧಿ ಸಿಬ್ಬಂದಿ ಕರೋನಾ ಮಹಾಮಾರಿಯ ಸಂಕಷ್ಟದ ಸಮಯದಲ್ಲೂ ಹಗಲಿರುಳು ಕೆಲಸ ಮಾಡಿದ್ದಾರೆ.
ಈ ಬಾರಿಯ ಬಜೆಟ್ ಗಾತ್ರ 2,46,206 ಕೋಟಿ ರೂಪಾಯಿಗೆ ಹೆಚ್ಚಳವಾಗಿದೆ. ಇದರಲ್ಲಿ ತೀವ್ರ ಸಂಕಷ್ಟದಲ್ಲಿರುವ ಸುಧಾರಣೆಯ ಅಗತ್ಯ ಇರುವ ಕೃಷಿ ಕ್ಷೇತ್ರಕ್ಕೆ ಯಡಿಯೂರಪ್ಪ ಮೀಸಲಿಟ್ಟಿರುವುದು ಕೇವಲ 31,028 ಕೋಟಿ ರೂಪಾಯಿ ಅನುದಾನ.
`ಧರ್ಮಬೀರು' ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ (BS Yediyurappa) ರಾಜ್ಯದಲ್ಲಿ ಮಠ ಮಾನ್ಯಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಸರ್ವಧರ್ಮಗಳನ್ನೂ ಸಂತೃಪ್ತಿಪಡಿಸುವ ಪ್ರಯತ್ನ ಯಡಿಯೂರಪ್ಪ ನಡೆಸಿರುವುದು ಬಜೆಟಿನಲ್ಲಿ (Budget) ಸ್ಪಷ್ಟವಾಗಿ ಗೋಚರಿಸುತ್ತಿದೆ.
ಒಟ್ಟು ಬೆಂಗಳೂರು ನಗರ ಅಭಿವೃದ್ಧಿಗೆ 7,795 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬೆಂಗಳೂರಿಗೆ ಕಡಿಮೆ ಅನುದಾನ ನೀಡಲಾಗಿದೆ. ಕಳೆದ ಬಾರಿ ಬೆಂಗಳೂರು 9.000 ಕೋಟಿ ರೂಪಾಯಿ ನೀಡಲಾಗಿತ್ತು.
ಅತ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಬಜೆಟ್ ಮಂಡಿಸುಸುತ್ತಿದ್ದರೆ ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರೂ ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿದರು.