Karnataka Budget 2023 : ಕೇಂದ್ರ ಬಜೆಟ್ಗೆ ಹೋಲಿಸಿದರೆ ರಾಜ್ಯ ಬಜೆಟ್ ಭಿನ್ನವಾಗಿರುತ್ತದೆ. ಇಂದು ಬೊಮ್ಮಾಯಿ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ರಾಜ್ಯದ ಬಜೆಟ್ನ ಮಂಡನೆ, ಸಿದ್ಧತೆ, ಮುದ್ರಣ ಈ ಬಗ್ಗೆ ಕೆಲವು ಇಂಟರೆಸ್ಟಿಂಗ್ ಸಂಗತಿಗಳು ಇಲ್ಲಿವೆ.
ಚಾಮರಾಜನಗರ ಜಿಲ್ಲೆಯಲ್ಲಿ ಬಹುಪಾಲು ಮಂದಿ ರೈತರು ಬಾಳೆ, ಅರಿಶಿಣ ಹಾಗೂ ಟೊಮ್ಯಾಟೊ, ಸಣ್ಣ ಈರುಳ್ಳಿಯನ್ನು ಬೆಳೆಯಲಿದ್ದು ತಮಿಳುನಾಡು ಮತ್ತು ಮೈಸೂರು ಉತ್ತಮ ಮಾರುಕಟ್ಟೆಗಳಾಗಿದೆ. ಹಾಗಾಗಿಯೇ ಅರಿಶಿಣಪುಡಿ ತಯಾರಿಕಾ ಘಟಕ ಮತ್ತು ಟೊಮೆಟೊ, ಬಾಳೆ ಸಂಸ್ಕರಣ ಘಟಕವನ್ನು ಸ್ಥಾಪಿಸಬೇಕೆಂದು ಇಲ್ಲಿನ ಜನರ ಬಹುವರ್ಷಗಳ ಬೇಡಿಕೆ.
ಕಳೆದ ಬಾರಿ 2ಲಕ್ಷ 65ಸಾವಿರ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ 3 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದಾರೆ. ಈ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಎಲ್ಲಾ ವರ್ಗಕ್ಕೂ ಶಿವರಾತ್ರಿ ಸಿಹಿ ನೀಡಲಿದ್ದು ಕಾಂಗ್ರೆಸ್ ಫ್ರೀ ಪಾಲಿಟಿಕ್ಸ್ಗೂ ಚೆಕ್ಮೇಟ್ ನೀಡಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
Karnataka Budget 2023: ರಾಜ್ಯ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ವಿಧಾನಸಭೆಯಲ್ಲಿ ವರ್ಷ 2023-24ನೇ ಸಾಲಿನ ಆರ್ಥಿಕ ಆಯವ್ಯಯ ಮಂಡಿಸಲಿದ್ದಾರೆ. ಏಪ್ರಿಲ್-ಮೇ ತಿಂಗಳಿನಲ್ಲಿ ನಡೆಯಬೇಕಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆ ಈ ಬಾರಿಯ ಬಜೆಟ್ ಜನಪರ ಬಜೆಟ್ ಆಗಿರುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಎಲ್ಲೆಡೆಯಿಂದ ವ್ಯಕ್ತವಾಗುತ್ತಿದೆ.
ಕಾಂಗ್ರೆಸ್ ಪಕ್ಷದಲ್ಲಿ ಖರ್ಗೆ, ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುವುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದು, ನಾನು ಅದಕ್ಕೆ ಬದ್ಧವಾಗಿದ್ದೇನೆ. ನಿಮ್ಮ ಬದುಕು ಹಸನಾಗಬೇಕು, ಎಲ್ಲ ವರ್ಗಕ್ಕೆ ಸಾಮಾಜಿಕ ನ್ಯಾಯ ಸಿಗಬೇಕು.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಧಿಕಾರವಧಿಯ ಎರಡನೇ ಬಜೆಟ್ ಮಂಡನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10.15ಕ್ಕೆ ಸಿಎಂ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಘೋಷಣೆ ಪ್ರಕ್ರಿಯೆ ಪ್ರಾರಂಭ ಆಗಲಿದೆ. 2022-23 ಸಾಲಿನಲ್ಲಿ 2.7 ಲಕ್ಷ ಕೋಟಿ ಆಯವ್ಯಯ ಮಂಡಿಸಿದ್ದ ಸಿಎಂ ಬೊಮ್ಮಾಯಿ ಈ ಬಾರಿ 3 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ.
karnataka Budget : ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಫೆ. 17 ರಂದು ಮಂಡನೆಯಾಗಲಿದೆ, ಕೊನೆಯ ಬಜೆಟ್ ಇದಾಗಿದ್ದು, ಅಂದು ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭಿಸಿದ್ದು, ಸುಮಾರು 1 ಗಂಟೆಗಳ ಕಾಲ ಬಜೆಟ್ ಭಾಷಣ ಮಾಡಲಿದ್ದಾರೆ.
Karnataka Budget 2023 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ (ಫೆ 17) 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರವು ತನ್ನ ಬೊಕ್ಕಸದಲ್ಲಿ ಅಂದಾಜಿಗಿಂತಲೂ ಹೆಚ್ಚಿನ ಹಣ ಸಂಗ್ರಹಿಸಿದೆ.
Karnataka Budget 2023 Expectations: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
Karnataka Budget 2023 Time: ಕರ್ನಾಟಕ ಬಜೆಟ್ ಮೇಲೆ ರಾಜ್ಯದ ಜನರ ದೃಷ್ಟಿ ನೆಟ್ಟಿದ್ದು, ಭಾರೀ ನಿರೀಕ್ಷೆಗಳನ್ನಿಟ್ಟಿದ್ದಾರೆ. ಇನ್ನು ಅದಾಗಲೇ ಬಜೆಟ್ ಅಧಿವೇಶನ ಫೆಬ್ರವರಿ 10 ರಿಂದ ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ. ಇನ್ನು ಫೆಬ್ರವರಿ 17 ರಂದು ಬಜೆಟ್ ಮಂಡನೆಯಾಗಿ ಫೆಬ್ರವರಿ 20 ರಿಂದ 22ರವರೆಗೂ ಅದರ ಮೇಲೆ ಚರ್ಚೆ ನಡೆಯಲಿದೆ.
ಜಂಟಿ ಅಧಿವೇಶನ ಆರಂಭವಾಗಿ ಎರಡು ದಿನ ಆಗಿದೆ.. ಇಂದು ಮೂರನೇ ದಿನದ ಕಲಾಪ ನಡೆಯಲಿದೆ. ಇದು ಸರ್ಕಾರದ ಕೊನೆಯ ಅಧಿವೇಶನ ಆಗಿದೆ. ಆದ್ರೆ ಯಾವುದೇ ಗಂಭೀರ ವಿಷಯಗಳ ಬಗ್ಗೆ ಚರ್ಚೆಯಾಗದೆ ಸಮಯ ವ್ಯರ್ಥವಾಗುತಿದೆ. ಇದರ ನಡುವೆ ನಿನ್ನೆ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮತ್ತು ಬಿಜೆಪಿ ನಾಯಕರ ಮಹಾಭಾರತದ ಕಥೆಯ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬೆಂಗಳೂರು:ರಾಜ್ಯ ಪಾಲರ ಭಾಷಣ ಬಗ್ಗೆ ಪ್ರಸ್ತಾಪ ಮಾಡಿದ ವಿರೋಧಪಕ್ಷದ ನಾಯಕ ಹಾಗೂ ಸಚಿವ ಮಾಧುಸ್ವಾಮಿ ಮದ್ಯೆ ಸ್ವಾರಸ್ಯ ಚರ್ಚೆ ನಡೆಯಿತು ವಿಧಾನಸಭೆಯಲ್ಲಿ ತೌಡು ಕುಟ್ಟುವ ಕುರಿತಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯಪಾಲರ ಭಾಷಣದ ಮೂಲಕ ತೌಡು ಕುಟ್ಟಿಸಿದ್ದಾರೆ ಎಂದು ಹೇಳಿದರು.
VISL Bhadravati:ಭದ್ರಾವತಿಯ VISL ಕಾರ್ಖಾನೆ ಮುಚ್ಚುವ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ,ಪ್ರೋಸೆಸ್ ಶುರುವಾಗಿದೆ ಅಂದ್ರೆ ಮುಚ್ಚೆ ಆಯ್ತು ಅಂತಲ್ಲ,ಕೆಲವು ಪ್ರೋಸೆಸ್ ಶುರುವಾಗಿದೆ ಅಷ್ಟೇ.
ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಸುತ್ತಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಹೊಂದಾಣಿಕೆ ಮಾಡಿಕೊಂಡು ಯಾತ್ರೆ ನಡೆಸುವ ಯೋಜನೆ ಹಾಕಿಕೊಂಡಿದ್ದಾರೆ. ಹಾಗೂ ಬಿಜೆಪಿ ಕೂಡ ವಿಜಯ ಸಂಕಲ್ಪ ಯಾತ್ರೆ, ಭೂತ್ ಅಭಿಯಾನ ಸೇರಿದಂತೆ ಅನೇಕ ಕಾರ್ಯಕ್ರಮ ನಡೆಸುತ್ತಿದೆ. ಜೊತೆಗೆ ಜೆಡಿಎಸ್ ಪಂಚ ರತ್ನ ಯಾತ್ರೆ ಕೂಡ ಸಾಗುತ್ತಿದ್ದೂ ಎಲ್ಲಾರು ಚುನಾವಣೆಯ ತಯಾರಿಯಲ್ಲಿದ್ದು, ಈ ಬಾರಿಯ ಅಧಿವೇಶನಕ್ಕೆ ಮೂರು ಪಕ್ಷದ ನಾಯಕರು ಗೈರಾಗುವ ಸಾಧ್ಯತೆ ಜಾಸ್ತಿಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.