ಶಾಸಕರು, ಎಂಎಲ್‌ಸಿಯೂ ಅಲ್ಲದ ಬೋಸರಾಜ್ ಅವರಿಗೆ ಸಚಿವ ಸ್ಥಾನ ಹೇಗೆ ಸಿಕ್ತು ಎಂದು ಒಳಗೊಳಗೆ ಕೈ ಪಡೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಸ್ವತಃ ಜನರಿಗೂ ಈ ಕುರಿತು ಶಾಕ್ ಉಂಟಾಗಿದ್ದು, ಯಾರು ಈ ಬೋಸರಾಜು ಅಂತ ತಲೆಕಡಿಸಿಕೊಂಡಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ಹೈಕಮಾಂಡ್ 24 ಸಚಿವರ ಪಟ್ಟಿಗೆ ಸಮ್ಮತಿ ನೀಡಿರುವ ಬೆನ್ನಲ್ಲೇ ಈಗ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.
Karnataka Cabinet Expansion: ನಾಳೆಯೇ ಸುಮಾರು 20 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಶುಕ್ರವಾರ ಕಾಂಗ್ರೆಸ್ ವರಿಷ್ಠರು ಅನುಮೋದನೆ ನೀಡುವ ಸಾಧ್ಯತೆಯಿದೆ.
ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಪಕ್ಷದ ವರಿಷ್ಠರು ಕರೆದಾಗ ತಾವು ದೆಹಲಿಗೆ ಹೋಗುವುದಾಗಿ ಈಗಾಗಲೇ ಸಿಎಂ ಹೇಳಿದ್ದಾರೆ. ಹೀಗಾಗಿ ಈ ದೆಹಲಿ ಭೇಟಿ ವೇಳೆ ಸಂಪುಟ ಬಗ್ಗೆ ಸಮಾಲೋಚನೆ ನಡೆಸಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಕೃಷ್ಣಾ ನದಿಯ 2ನೇ ಟ್ರಿಬ್ಯುನಲ್ ಗಳ ಅಧಿಸೂಚನೆಗೆ ಸಂಬಂಧಿಸಿದಂತೆ ಕಳೆದ ಬಾರಿ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದು, ಈ ಬಾರಿ ಹೊಸ ನ್ಯಾಯಮೂರ್ತಿಗಳ ನೇಮಕ್ಕಕ್ಕೆ ರಿಜಿಸ್ಟ್ರಾರ್ ಜನರಲ್ ಬಳಿ ಮುಂದಿನ ವಿಚಾರಣೆಯಷ್ಟರಲ್ಲಿ ನೇಮಕವಾಗಬೇಕೆಂದು ಅರ್ಜಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿ ಮಾಡುವ ಕುರಿತು ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.