CM Siddaramaiah : ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ.
Small-Medium and Micro-Industries : ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
CM Siddaramaiah : ಮಹಿಳೆಯರು ಸಮಾಜದಲ್ಲಿ ಶೇ 50 ರಷ್ಟಿದ್ದಾರೆ,ಶತ ಶತಮಾನಗಳಿಂದ ಅವಕಾಶ ವಂಚಿತರಾಗಿದ್ದಾರೆ. 2014 ವರೆಗೆ ಮಹಿಳೆಯರು ಸಾಮಾಜಿಕ ಜೀವನದಲ್ಲಿ ಶೇ 30ರಷ್ಟು ಪಾಲುದರಿಕೆಯನ್ನ ಹೊಂದಿದ್ದರು. ಈಗ 24% ಇಳಿದಿದೆ, ಮೊಸಳೆ ಕಣ್ಣೀರು ಹಾಕುವ ಮನುವಾದಿಗಳು ಮಹಿಳೆಯರ ಶಕ್ತಿಕರಣ ಸಹಿಸಲ್ಲ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಚಿವ ಸಂಪುಟ ರಚನೆ ಬೆನ್ನಲ್ಲೆ ನೂತನ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಂಡು, ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಲು ಹೇಳಿದ್ದಾರೆ. ಅಲ್ಲದೆ, ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.
Cabinet Ministers: ಕಾಂಗ್ರೆಸ್ನಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳು ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದು ಖಾತೆಗಳಿಗಾಗಿ ಲಾಬಿ ನಡೆಸಲು ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಗೆ ದೌಡಾಯಿಸುತ್ತಿದ್ದಾರೆ.
Karnataka New Chief Minister: ಕಾಂಗ್ರೆಸ್ ಕುರ್ಚಿ ಕಿತ್ತಾಟಕ್ಕೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ಕಾಂಗ್ರೆಸ್ ಹೈ ಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಿಸಿದೆ.
Congress Ministers: ಒಂದೆಡೆ ಸಿಎಂ ಯಾರು ಎಂಬ ಗೊಂದಲಕ್ಕೆ ಕಾಂಗ್ರೆಸ್ ತೆರೆ ಎಳೆಯಬೇಕಿದೆ. ಮುಂಬರುವ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. ಇನ್ನೊಂದು ಕಡೆ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಶಾಸಕರ ಲಾಭಿ ಕೂಡ ಆರಂಭವಾಗಿದೆ. ಈಗಾಗಲೇ ಸದ್ಯ 25 ರಿಂದ 30 ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ನಮಗೆ ಈ ಬಾರಿ ಸಚಿವ ಸ್ಥಾನ ಬೇಕು ಅಂತ ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.