ಮುಜರಾಯಿ ಇಲಾಖೆ ಮತ್ತು ಮಹಿಳಾ ಕಲ್ಯಾಣಕ್ಕೆ ದಾಖಲೆಯ ಅನುದಾನ ನೀಡುವ ಮೂಲಕ ಹಣಕಾಸು ಇಲಾಖೆಯ ಹೊಣೆಯನ್ನೂ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಐತಿಹಾಸಿಕ ಮತ್ತು ಕ್ರಾಂತಿಕಾರಕವಾಗಿದೆ ಎಂದು ಮುಜರಾಯಿ ಖಾತೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಬಣ್ಣಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬಿಜೆಪಿ ಎಂಪಿಯಾಗಿರುವ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಬೇಕೆಂಬ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆಗೆ ಕೇಂದ್ರದ ಅನುಮತಿ ಪಡೆಯಲು. ಅಲ್ಲದೆ, ನೆನಗುದಿಗೆ ಬಿದ್ದಿರುವ ವಿವಿಧ ಯೋಜನಗಳಿಗೆ ಅನುಮೋದನೆ ಮತ್ತು ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಮೊನ್ನೆಯಷ್ಟೇ ತಮ್ಮ ಸೇವೆ ಕಾಯಂಗೊಂಡ ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು ಮುಖ್ಯಮಂತ್ರಿ ಯವರೊಂದಿಗೆ ಬೆಳಗ್ಗಿನ ಉಪಾಹಾರ ಸವಿಯುವ ಅವಕಾಶ. ಇದು ಅವರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಿತ್ತು.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರ ವಿರುದ್ದ ವಕೀಲ ಎಸ್.ನಟರಾಜ ಶರ್ಮಾ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಒಮಿಕ್ರೋನ್ ರೂಪಾಂತರಕ್ಕೆ ಸಂಬಂಧಿಸಿದಂತೆ ಏನು ನಡೆಯುತ್ತಿದೆ ಮತ್ತು ಕೋವಿಡ್-19 ಕ್ಲಸ್ಟರ್‌ಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಕ್ಯಾಬಿನೆಟ್ ಮತ್ತು ಅದರ ಪ್ರಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು, ”ಎಂದು ತಿಳಿಸಿದರು.
ಈಗಾಗಲೇ ತಜ್ಞರ ಸಮಿತಿಯು ವರದಿಯನ್ನು ನೀಡಿದೆ. ಈ ವರದಿಯನ್ನಾಧರಿಸಿ ಆದೇಶ ಹೊರಡಿಸುವುದಾಗಿ ಸಿಎಂ ಹೇಳಿದ್ದಾರೆ. ಯಾವ ದಿನಾಂಕದಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂಬಿತ್ಯಾದಿ ವಿವರಗಳಿಗೆ ಸಂಬಂಧಿಸಿದಂತೆ, ರಾಜ್ಯ ಮುಖ್ಯ ಕಾರ್ಯದರ್ಶಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.