Karnataka Election Photos : ಈ ಅಂಬಾಸಿಡರ್ ಕಾರು ತಮಗೆ ಅದೃಷ್ಟವೆಂದು ಬಿಎಸ್ವೈ ನಂಬಿದ್ದಾರಂತೆ. ಹೀಗಾಗಿ ತಮ್ಮ ಪುತ್ರನ ಗೆಲುವಿಗಾಗಿ ಅದೃಷ್ಟದ ಕಾರಿನಲ್ಲಿ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶಾಸಕ ರೇಣುಕಾಚಾರ್ಯ ವಿರುದ್ಧ ಹೆಸರು ಹೇಳದೆ ಕಾಂಗ್ರೆಸ್ ಅಭ್ಯರ್ಥಿ ಡಿ. ಜಿ. ಶಾಂತನಗೌಡ ಸಿಡಿ ಬಾಂಬ್ ಸಿಡಿಸಿದ್ದಾರೆ. ಅಲ್ಲದೆ, ರೇಣುಕಾಚಾರ್ಯ ಅವರ ಸಿಡಿ ಇದ್ದು, ಅದನ್ನು ಸ್ಟೇ ವೆಕೆಟ್ ಆದ ಮೇಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಡಿಕೆಶಿ ನಾಮಪತ್ರವನ್ನು ರಾಜ್ಯ ಚುನಾವಣಾ ಪ್ರಾಧಿಕಾರ ಅಂಗೀಕಾರಮಾಡಿದೆ. ಇದರಿಂದ ಐಟಿ, ಇಡಿ ಸೇರಿದಂತೆ ಯಾವುದೇ ದಾಳಿ ಭಯ ಡಿಕೆಶಿಗೆ ಇಲ್ಲ. ನಿರ್ಭಯವಾಗಿ ನಿರ್ಭೀತಿಯಿಂದ ಚುನಾವಣಾ ಕಾರ್ಯಗಳಲ್ಲಿ ಭಾಗಿಯಾಗಬಹುದು. ಇನ್ನು ಅಣ್ಣನ ನಾಮ ಪತ್ರ ಅಂಗೀಕಾರವಾದ ಹಿನ್ನೆಲೆ ಡಿ.ಕೆ. ಸುರೇಶ್ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇದೆ.
Karnataka Election 2023: ನನ್ನ ಅಧ್ಯಕ್ಷತೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆದಿದ್ದು, ರಾಜಕೀಯದಿಂದ ನನ್ನನ್ನು ದೂರಮಾಡಲು ಷಡ್ಯಂತ್ರ ನಡೆಯುತ್ತಿದೆ. ಹೀಗಾಗಿ ಅಧಿಕಾರಿಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಡಿ.ಕೆ. ಸುರೇಶ್ ಅವರು ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ರಾಜಕೀಯದತ್ತ ಯುವಕರು ಒಲುವು ತೋರುತ್ತಿದ್ದಾರೆ. ಪ್ರಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಮನಸ್ಸು ಮಾಡಿದ್ದಾರೆ.. ಇದಕ್ಕೆ ಉದಾಹರಣೆ ಎಂಬಂತೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಇರ್ಫಾನ್ ಪಾಷಾ ಎಂಬ ಯುವಕ ಇಂದು ನಾಮಿನೇಶನ್ ಸಲ್ಲಿಸಿದ್ದಾರೆ. ಕಾಲೇಜ್ ದಿನಗಳಿಂದ ಯೂತ್ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಇರ್ಫಾನ್, ಈಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಹುಬ್ಬಳ್ಳಿ- ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ನಾಮಪತ್ರ ಸಲ್ಲಿಕೆ ನಿಮಿತ್ತ ನಡೆದ ರೋಡ್ ಶೋನಲ್ಲಿ ಮಾಜಿ ಸಚಿವರಾದ ಸಂತೋಷ್ ಲಾಡ್ ಭಾಗವಹಿಸಿದರು. ಧಾರವಾಡ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆ ವಿನಯ್ ಕುಲಕರ್ಣಿ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ. ಎಲ್ಲಾ ನಾಯಕರು ಸರ್ವ ಸಮ್ಮತದಿಂದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ 40 ಪರ್ಸೆಂಟ್ ಸರಕಾರದ ಬಿಜೆಪಿ 40 ಸೀಟು ಗೆಲ್ಲಲು ಸಾಧ್ಯವಿಲ್ಲ. ಹೀಗಿರುವಾಗ 25ಕ್ಕೂ ಹೆಚ್ಚು ಜನರು ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ನಡೆಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಲೇವಡಿ ಮಾಡಿದ್ದಾರೆ.
ಸುಮಾಲತಾ ಅಂದ್ರೆ ಕುಮಾರಸ್ವಾಮಿಗೆ ಭಯ. ಅಂಬರೀಶ್ ರಿಂದ ಏನೂ ಅನುಕೂಲ ಆಗಿಲ್ಲ ಅಂತ ಹೇಳ್ತಾರೆ. ಅಂಬರೀಶ್ ಬಗ್ಗೆ ಮಂಡ್ಯ ಜನರಿಗೆ ಗೊತ್ತು. ಏಳಕ್ಕೆ ಏಳು ಸೀಟ್ ಜೆಡಿಎಸ್ ಗೆಲ್ಲೊಕೆ ಅಂಬರೀಶ್ ಕಾರಣ. ಸಿಎಂ ಹಾಗೋಕು ಅವರೇ ಕಾರಣ ಎಂದು ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದರು.
ಲಿಂಗಾಯತ ಸಮಾಜವನ್ನ ಒಡೆಯುವಂತ ಕೆಲಸ ಕಾಂಗ್ರೆಸ್ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್ನಲ್ಲಿ ಎಸ್ ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದರು.
ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ. ಕಾಂಗ್ರೆಸ್ ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಆದ್ರೆ, ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದರು.
ಸಿದ್ದರಾಮಯ್ಯ ಅವರಿಗೆ ಸ್ವಂತ ಬಲ ಇದ್ದರೆ ಗೆಲ್ಲುತ್ತಾರೆ, ಇಲ್ಲದಿದ್ದರೆ, ಗೆಲ್ಲುವುದಿಲ್ಲ. ನನ್ನ ಕ್ಷೇತ್ರ ಶಿಗ್ಗಾಂವಿಯಲ್ಲೂ ಕಾಂಗ್ರೆಸ್- ಜೆಡಿಎಸ್ ಸೇರಿಕೊಂಡಿದ್ದಾರೆ. ಇದರಿಂದ ನನಗೇನೂ ಭಯವಿಲ್ಲ. ನಾನು ಸ್ವಂತ ಬಲದಿಂದ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.