ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಸದರಿ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.
ಕೋಲಾರ ಸ್ಪರ್ಧೆಯಿಂದ ಸಿದ್ದರಾಮಯ್ಯ ವಾಪಸ್ ಹಿನ್ನೆಲೆ ಸಿದ್ದರಾಮಯ್ಯ ನಿವಾಸದತ್ತ ʻಕೈʼ ಕಾರ್ಯಕರ್ತರು ಆಗಮಿಸ್ತಿದ್ದಾರೆ. ಕೋಲಾರದಿಂದ ಅಭಿಮಾನಿಗಳು ಬರ್ತಿದ್ದು, ಕೋಲಾದಿಂದಲೇ ಸ್ಪರ್ಧೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.
Karnataka Election 2023 : ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಇವರು ಖಚಿತ ಪಡಿಸಿದ್ದಾರೆ. ಆಮ್ ಆದ್ಮಿ ಪಾರ್ಟಿಯು ಇಂದು ದೇಶದ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದ್ದು, ಅನೇಕ ರಾಜ್ಯಗಳಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಲು ಮತ್ತು ಗೆಲ್ಲಲು ಸಮರ್ಥವಾಗಿದೆ ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
Former MP LR Shivaramegowda : ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಭಾನುವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ಅನೌನ್ಸ್ ಮಾಡುವ ಸಾಧ್ಯತೆ ದಟ್ಟವಾಗಿದೆ. ಇತ್ತೀಚೆಗೆ ಪಕ್ಷದ ಬಗ್ಗೆ ಲಘುವಾಗಿ ಹೇಳಿಕೆ ನೀಡಿದ್ದ ಕಾರಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಹಲವು ತಿಂಗಳಿಂದ ಮಂಡ್ಯದ ನಾಗಮಂಗಲ ಕ್ಷೇತ್ರದಲ್ಲಿ ಶಿವರಾಮೇಗೌಡರು ಸಕ್ರಿಯರಾಗಿದ್ದರು.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಅಪಾರ ಜನ ಬೆಂಬಲ ಸಿಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 135-140 ಸ್ಥಾನಗಳನ್ನು ಗೆದ್ದು ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಎಸ್ವೈ ಹೇಳಿದರು.
Karnataka Election 2023 : ನವದೆಹಲಿಯಲ್ಲಿ AICC ಸಭೆ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಿನ್ನೆಯ ಸಭೆಯಲ್ಲೇ ನನ್ನ ಟಿಕೆಟ್ ಕ್ಲಿಯರ್ ಮಾಡಿಲ್ಲ. ಕೋಲಾರದಲ್ಲಿ ನಿಲ್ಲುವುದಿಲ್ಲ ಎಂದು ಪರೋಕ್ಷವಾಗಿ ಹೇಳಿರುವ ಎಂದು ತಿಳಿಸಿದ್ದಾರೆ.
ನಮ್ಮ ಮನೆಗೆ ಮುಸ್ಲಿಂ ಸಮುದಾಯ ಮುಖಂಡರು ಬಂದಿದ್ದರು. ಮುಸ್ಲಿಂ ಮುಖಂಡರು ಟಿಕೆಟ್ ಕೇಳು ಅಂದ್ರೆ ʻಬಿʼ ಫಾರಂ ಕೇಳುತ್ತೇನೆ ಎಂದು ಅಥಣಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.