ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಂದಿನ ವರೆಗೆ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಫ್ರೂಟ್ಸ್ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನು ನಮೂದಿಸಿ, ಸಕಾಲದಲ್ಲಿ ರೈತರಿಗೆ ಪರಿಹಾರ ತಲುಪಿಸುವಂತೆ ಮಾಡುವಲ್ಲಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದು ಅವರು ಹೇಳಿದರು.
ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ನ ಅಡಿಯಲ್ಲಿ ಬೆಳಗಾವಿಯ ಸವದತ್ತಿ ರೈತರಿಗೆ ಕೋಲ್ಕತ್ತಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದು, ಫೆ.18, 2019 ರ ವೇಳೆಗೆ ಕೋರ್ಟ್ ಎದುರು ಹಾಜರುಪಡಿಸುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.