ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಭಾಗದ ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
Krishna Byregowda: ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳ ಜೊತೆ ಗುರುವಾರ ಕೃಷ್ಣ ಬೈರೇಗೌಡ ಮಹತ್ವದ ಸಭೆ ನಡೆಸಿದ್ದಾರೆ. ಇದೇ ವೇಳೆ ಮಾತನಾಡಿದ ಕೃಷ್ಣ ಬೈರೇಗೌಡ, ಬಡವರೂ ಬದುಕಬೇಕು, ಶ್ರೀಮಂತರೂ ಬದುಕಬೇಕು, ದುಡಿಮೆಯ ವರ್ಗವೂ ಬದುಕಬೇಕು. ಎಲ್ಲರೂ ಒಟ್ಟಾಗಿದ್ದರೆ ಮಾತ್ರ ಬೆಂಗಳೂರು ಅಭಿವೃದ್ಧಿಯಾಗಲು ಸಾಧ್ಯ ಎಂದು ಹೇಳಿದ್ದಾರೆ.
ಸಾಲ ಮನ್ನಾ ಮಾಡುವಂತೆ ಸರ್ಕಾರದ ಮೇಲೆ ಒತ್ತಾಯ ಕೇಳಿಬರುತ್ತಿದೆ. ಈ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಸಾಲ ಮನ್ನಾ ಕುರಿತು ಪರಿಶೀಲನೆ ಮಾಡುದಾಗಿ ಹೇಳಿದ್ದಾರೆ.
Bengaluru Footpath Clearance: ಫುಟ್ಪಾತ್ ಒತ್ತುವರಿ (Bengaluru Footpath Clearance) ವಿರುದ್ಧ ಬೀದಿಬದಿ ವ್ಯಾಪಾರಿಗಳು ಸಮರಕ್ಕೆ ಮುಂದಾಗಿದ್ದಾರೆ. ಸರ್ಕಾರದ ಕ್ರಮಕ್ಕೆ ಬೀದಿ ಬದಿ ವ್ಯಾಪಾರಿಗಳ ಸಂಘ ವಿರೋಧ ವ್ಯಕ್ತಪಡಿಸಿದ್ದು, ಇದನ್ನು ಖಂಡಿಸಿ ಇಂದು (ಜುಲೈ 8) ನಗರದಾದ್ಯಂತ ಬೀದಿ ವ್ಯಾಪಾರ ಬಂದ್ ಮಾಡಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ (Protest) ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
Free Current Scheme: ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ "ಗೃಹ ಜ್ಯೋತಿ" ಅಡಿಯಲ್ಲಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳ ಮಾಹಿತಿ ಪರಿಶೀಲನೆ ಕಾರ್ಯ ಜುಲೈ 1, 2026 ರಂದ ಆರಂಭವಾಗಿದೆ. ಈ ವೇಳೆ ಬಾಡಿಗೆ ಮನೆಗಳಲ್ಲಿ ವಾಸವಾಗಿರುವವರಿಗೆ ಬೆಸ್ಕಾಂ ಬಿಗ್ ಅಪ್ಡೇಟ್ ಕೊಟ್ಟಿದೆ.
Pensioner News: ರಾಜ್ಯ ಸರ್ಕಾರದ ನಿರ್ಧಾರದಿಂದ ಪಿಂಚಣಿದಾರರಿಗೆ ಆಘಾತವಾಗಿದೆ. ಪಿಂಚಣಿದಾರ ಪ್ರಮುಖ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರ ಬಿಲ್ ಕುಲ್ ಸಾಧ್ಯವಿಲ್ಲ ಎಂದು ಹೇಳಿದೆ.
Indira Kit News: ಇಂದಿರಾ ಕಿಟ್ ಯೋಜನೆಯನ್ನು ಆರಂಭಿಸಬೇಕು ಎಂದು ಸಂಪುಟ ಸಭೆ ಒಪ್ಪಿಗೆಯನ್ನೂ ನೀಡಿದೆ. ಆದರೂ ಯೋಜನೆ ಆರಂಭವಾಗುವುದು ಅನುಮಾನ. ಏಕೆ ಅಂತಾ ತಿಳಿಯಿರಿ.
Madapatna Quarry Accident: ಮಾದಪಟ್ಟಣ ಕ್ರಷರ್ ಘಟಕದಲ್ಲಿ ಸಂಭವಿಸಿದ ದುರಂತದಲ್ಲಿ ಕಾರ್ಮಿಕರ ಸಾವಿಗೆ ಸಂಬಂಧಿಸಿದ ಪ್ರಕರಣದ ಕುರಿತು ಗಣಿ & ಭೂ ವಿಜ್ಞಾನ ಇಲಾಖೆಯಿಂದ ವರದಿ ತಯಾರಿಯಾಗಿದ್ದು, ಈ ವೇಳೆ ಹಲವು ಕಾರಣಗಳು ಬಹಿರಂಗವಾಗಿದೆ ಎಂದು ಹೇಳಲಾಗಿದೆ.
Bengaluru Update: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ವಾಕ್ ಮಾಡಬೇಕು ಅಂದ್ರೆ ಪ್ರಸ್ತುತ ಸವಾಲಿನ ಕೆಲಸ.. ಎಲ್ಲಿ ನೋಡಿದ್ರೂ ಒಂದಾ ಅಂಗಡಿಗಳು, ಇಲ್ಲಾ ಗಾಡಿಗಳ ಪಾರ್ಕಿಂಗ್ ಇದ್ದೇ ಇರುತ್ತದೆ. ಆದರೆ ಇದೀಗ ಈ ಎಲ್ಲಾ ತೊಂದರೆಗಳಿಗೆ ಕಡಿವಾಣ ಹಾಕಲು ಸಚಿವ ಕೃಷ್ಣ ಬೈರೇಗೌಡರು ಮಹತ್ವದ ನಿರ್ಣಯಕ್ಕೆ ಮುಂದಾಗಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಬೆಸ್ಕಾಂ ಇಲಾಖೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕದ ಅರ್ಜಿ ಸಲ್ಲಿಸಲು ತೊಂದರೆ ಆಗದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಸಿಬ್ಬಂದಿ ಮತ್ತು ಅಧಿಕಾರಿಗಳ ರಜೆಯನ್ನು ಕಟ್ (BESCOM Holiday Cut) ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ದುರುಪಯೋಗವನ್ನು ತಡೆಯಲು ಮುಂದಾಗಿದೆ. ಅದರಿಂದಾಗಿ ಯೋಜನೆಯ ಲಾಭ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಇದಕ್ಕೆ ಸಂಬಂಧಿಸಿದಂತೆ 2-3 ದಿನದಲ್ಲಿ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯದ ಯಾವುದೇ ಸರ್ಕಾರ ವಿದ್ಯುತ್ ಖಾಸಗೀಕರಣಕ್ಕೆ ಮುಂದಾದರೆ ಅದು ಜನರಿಗೆ ಮಾಡುವ ದೊಡ್ಡ ಅನ್ಯಾಯವಾಗಲಿದೆ. ಸ್ಪಷ್ಟವಾಗಿ ಖಾಸಗೀಕರಣ ಮಾಡುವುದಿಲ್ಲವೆಂದು ಸಿಎಂ ಘೋಷಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಜನರು ತೀವ್ರ ಹೋರಾಟಕ್ಕೆ ಮುಂದಾಗುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೆ.ಎಸ್.ಈಶ್ವರಪ್ಪಎಚ್ಚರಿಸಿದ್ದಾರೆ.
ಆಡಳಿತದಲ್ಲಿದ್ದ ಲೋಪದೋಷಗಳನ್ನು (ಲೂಪ್ ವೋಲ್ಸ್) ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯಲ್ಲಿ ಆನ್ಲೈನ್ ಮೂಲಕ ಕೆಲಸ ನಿರ್ವಹಿಸುವ ಅತ್ಯಾಧುನಿಕ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಉಚಿತ ಬಸ್ ಪಾಸ್ ಪಡೆಯಲುವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ತಮ್ಮ ಮೊಬೈಲ್ ಫೋನ್, ಸೈಬರ್ ಸೆಂಟರ್ ಅಥವಾ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಗ್ಯಾರೆಂಟಿ ಯೋಜನೆಗಳ ಅವೈಜ್ಞಾನಿಕ ಅನುಷ್ಠಾನ ಹಾಗೂ ಕಾನೂನು ಸುವ್ಯವಸ್ಥೆ ಕುಸಿತದ ವಿರುದ್ಧ ಸರಣಿ ಆರೋಪಗಳನ್ನು ಮಾಡಿದರು.
ರಾಜ್ಯ ಸರ್ಕಾರವು 2026-27ನೇ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸುಮಾರು 51 ಸಾವಿರ ಅತಿಥಿ ಶಿಕ್ಷಕರನ್ನ ನೇಮಕ ಮಾಡಲು ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಕರ ಕೊರತೆಯಿಂದ ಪಾಠ ಬೋಧನೆಗೆ ಉಂಟಾಗುತ್ತಿದ್ದ ಸಮಸ್ಯೆ ನಿವಾರಣೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಕುರಿತು ಜಿಲ್ಲಾವಾರು ಹುದ್ದೆಗಳ ಭರ್ತಿಗೆ ಸಿದ್ಧತೆ ಆರಂಭಿಸಿದೆ.
Gruhalakshmi scheme: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ನ್ಯೂಸ್ ಬಂದಿದೆ. ರಾಜ್ಯದ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯೋಜನೆ 30ನೇ ಕಂತಿನ ಹಣ ಬಿಡುಗಡೆ ಆಗಿದೆ.
KSRTC workers strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಿಬ್ಬಂದಿ ಟ್ರೇಡ್ ಯೂನಿಯನ್ಗಳ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ..
ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳ ಆಸ್ತಿ ಮಾಲೀಕರಿಗೆ ಭೂ ದಾಖಲೆಗಳನ್ನ ಸುರಕ್ಷತೆ, ವಂಚನೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಇಡೀ ದೇಶದಲ್ಲಿಯೇ ಮೊದಲಬಾರಿಗೆ ಇ-ಖಾತಾ ಪರಿಚಯಿಸಿದ ಕೀರ್ತಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ. ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ಬೆಂಗಳೂರು ನಗರಕ್ಕೆ 6ನೇ ಗ್ಯಾರಂಟಿ ಘೋಷಿಸಲಾಗಿದೆ. ಅದುವೇ ಐತಿಹಾಸಿಕ "ಭೂ ಗ್ಯಾರಂಟಿ" ಯೋಜನೆ.