ಸದರಿ ದಾವೆಯಲ್ಲಿ ಪ್ರತಿವಾದಿಯು ತಮ್ಮ ಕುಟುಂಬದಲ್ಲಿ 1880 ನೇ ಇಸವಿಯಲ್ಲಿಯೇ ಕುಟುಂಬದ ಆಸ್ತಿಗಳ ವಿಭಾಗವಾಗಿದೆ ಹಾಗೂ ಇದೇ ಕುಟುಂಬದ ಆಸ್ತಿಗಳ ಬಗ್ಗೆ ಈ ದಾವೆಯ ಪ್ರತಿವಾದಿ ನಂ.1 ಇವರ ಅಜ್ಜನವರು ವಾದಿಯ ಮಾವನವರ ವಿರುದ್ದ 1898 ರಲ್ಲಿ ಅಥಣಿ ಸಿವಿಲ್ ಜಡ್ಜ್ ಜೂನಿಯರ ಡಿವಿಜನ್ ನ್ಯಾಯಾಲಯದಲ್ಲಿ ಸಹ ಕೆಲವು ಜಮೀನುಗಳ ಬಗ್ಗೆ ದಾವೆಯು ದಾಖಲಾಗಿ ಪ್ರತಿವಾದಿಯ ಅಜ್ಜನ ಪರವಾಗಿ ನಿಕಾಲಿಯಾಗಿತ್ತು ಎಂಬ ವಾದವನ್ನು ಮಂಡಿಸಿದ್ದರು.
Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
MUDA SCAM: ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.
Muda Scam: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿಎಂಗೆ ಮಹತ್ವದ ಸಲಹೆ ನೀಡಿರುವ ಸಂತೋಷ್ ಹೆಗ್ಡೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
Bharatiya Nagrik Surasha Sanhita: ಅತ್ಯಾಚಾರ ಸಂತ್ರಸ್ತೆಯರ ವೈದ್ಯಕೀಯ ಪರೀಕ್ಷೆಯನ್ನು ನೊಂದಾಯಿತ ಮಹಿಳಾ ವೈದ್ಯಕೀಯ ಅಧಿಕಾರಿಗಳು ಅಥಾವ ಅಂತಹ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಮಾತ್ರ ನಡೆಸಬೇಕು ಎಂಬುದರ ಕುರಿತಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಖಚಿತ ಪಡಿಸಿಕೊಳ್ಳಬೇಕು.
Chaitra Gowda suicide case: ಚೈತ್ರಾರ ಸಾವಿನ ಹಿಂದೆ ಅಪರಿಚಿತ ಕೈವಾಡವಿದೆ. ಈ ಬಗ್ಗೆ ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘವು ಸಹ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ, ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಅಂತಾ ವಕೀಲರ ಸಂಘದ ಸದಸ್ಯರು ತಿಳಿಸಿದ್ದರು.
ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದಲ್ಲಿ ಮಾರ್ಚ್ 16 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್ದಲ್ಲಿ ಒಟ್ಟು 583 ಪ್ರಕರಣಗಳ ಪೈಕಿ 200 ಪ್ರಕರಣಗಳನ್ನು ರೂ.4,16,68,242/- ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನಕ್ಕೂ ಹಿಂದಿನ 48 ಗಂಟೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಕೇವಲ ಮತ ಎಣಿಕೆ ಹಾಗೂ ಮತದಾನ ದಿನಕ್ಕೆ ಸೀಮಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದೆ.
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಅತಿ ಹೆಚ್ಚು ಪ್ರಕರಣಗಳು ಮೋಟಾರ ವಾಹನ ಮತ್ತು ಮ್ಯಾಟ್ರೀಮೋನಿಗೆ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 1005 ಪ್ರಕರಣಗಳ ಪೈಕಿ ಒಟ್ಟು 272 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠ ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರು ಹೇಳಿದರು
Karnataka PSI recruitment scam: ಕಲಬುರಗಿ ನಗರದ ಅಶೋಕ್ ನಗರ ಠಾಣೆಯಲ್ಲಿ ೫, ಸ್ಟೆಷನ್ ಬಜಾರ್ ಠಾಣೆಯಲ್ಲಿ ೨, ಚೌಕ್ ಠಾಣೆಯಲ್ಲಿ, ಧಾರವಾಡದ ಸಬ್ ಅರ್ಬನ್, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಗಳಲ್ಲಿ ದಾಖಲಾಗಿರುವ ತಲಾ ಒಂದೊಂದು ಎಫ್ಐಆರ್ ಮತ್ತು ಆರೋಪ ಪಟ್ಟಿಯನ್ನು ಒಟ್ಟಾಗಿಸಬೇಕು ಎಂದು ಆರ್.ಡಿ.ಪಾಟೀಲ್ ಮನವಿ ಮಾಡಿದ್ದ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಅಧ್ಯಕ್ಷರನ್ನು ನೇಮಕ ಮಾಡುವ ಸಂಬಂಧ ಈ ಹಿಂದೆ ವಿವಿಧ ನ್ಯಾಯಾಲಯಗಳು ನೀಡಿರುವ ಆದೇಶಗಳಂತೆ ಅಗತ್ಯ ಮಾರ್ಗಸೂಚಿಗಳನ್ನು ತಿದ್ದಪಡಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
Karnataka High Court: ಕರ್ನಾಟಕ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಮುಖ್ಯ ಪರೀಕ್ಷೆಗೆ 8.5 ತಿಂಗಳ ಗರ್ಭಿಣಿ ಆಯ್ಕೆಯಾಗಿದ್ದು ಸೂಕ್ಷ್ಮ ಆರೋಗ್ಯ ಸ್ಥಿತಿಯಿಂದ ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಕಾರಣ ತಮ್ಮ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.
ಇಂದು ಕರ್ನಾಟಕ ಉಚ್ಚ ನ್ಯಾಯಾಲಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಮುಂದಿನ ಮೂರು ತಿಂಗಳಲ್ಲಿ FIR ಸಲ್ಲಿಸಲು ಸೂಚನೆ ನೀಡಿದ್ದು ಕಾಂಗ್ರೆಸ್ ನಲ್ಲಿ ಸಂಚಲನ ಉಂಟುಮಾಡಿದೆ.
ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.