ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಊಟ ಮತ್ತು ವಸತಿಯೊಂದಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ.
KPCL Recruitment 2023: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್( KPCL)ನಲ್ಲಿ ಖಾಲಿಯಿರುವ ಆಫೀಸ್ ಅಸಿಸ್ಟೆಂಟ್ ಮತ್ತು ಅಸಿಸ್ಟೆಂಟ್ ಟು ಹೆಡ್ ಹುದ್ದೆಗಳ ನೇಮಕಾತಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ನಿಮಾನ್ಸ್ ಸಂಸ್ಥೆ ಸಹಯೋಗದೊಂದಿಗೆ ಯುವ ಸ್ಪಂದನ ಕೆಂದ್ರದಲ್ಲಿ ಆರಂಭಿಸಲಾದ “ಯುವ ಪರಿವರ್ತಕರಾಗಿ” ಕಾರ್ಯನಿರ್ವಹಿಸಲು ಅರ್ಹ ಸ್ಥಳೀಯ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಲಬುರಗಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ರಾಯಚೂರು: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.
ಧಾರವಾಡ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದೆ.ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಅಂತಾರಾಷ್ಟ್ರೀಯ, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ವಿಜೇತ ಅಥವಾ ವಿಶ್ವವಿದ್ಯಾನಿಲಯದವರು ನಡೆಸಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ 40 ವರ್ಷದೊಳಗಿನ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಹಾಕುವಾಗ ತಪ್ಪು ಮಾಹಿತಿ ಒದಗಿಸಿದ್ದ ಅಭ್ಯರ್ಥಿಗಳಿಗೆ ಇದನ್ನು ಸರಿಪಡಿಸಿಕೊಳ್ಳಲು ಫೆ.12 ಮತ್ತು 13ರ ಮಟ್ಟಿಗೆ ಎರಡು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ : ತಾಲ್ಲೂಕಿನ ದದೇಗಲ್ನಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಅಡಿಯಲ್ಲಿ ಎಸ್.ಎಸ್.ಎಸಲ್.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಮುಗಿಸಿರುವ ವಿದ್ಯಾರ್ಥಿಗಳಿಗೆ ಟರ್ನರ್, ಮಿಲ್ಲರ್, ಗ್ರಿಂಡರ್, ಸಿಎನ್ಸಿ, ಟೂಲ್ರೂಂ ಮಷಿನಿಷ್ಟ್, ಡಿಸೈನ್ ಸಾಫ್ಟ್ವೇರ್(ಮೆಕ್ಯಾನಿಕಲ್) ಕೋರ್ಸುಗಳಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಮೇಲ್ವಿಚಾರಣೆಗಾಗಿ ತಾಲೂಕು ಪಂಚಾಯತಿಗಳು ಪ್ರಮುಖ ಪಾತ್ರ ಹೊಂದಿದ್ದು, ತಾಲೂಕು ಪಂಚಾಯತಿಗಳಿಗೆ ಮಂಜೂರಾದ ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಯೋಜನೆಯ ಮೇಲ್ವಿಚಾರಣೆಗೆ ಅಡಚಣೆ ಉಂಟಾಗಿರುತ್ತದೆ.
ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆ ಹಾಗೂ ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅನುಕೂಲವಾಗುವಂತೆ ಕಲಬುರಗಿ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿಯಿರುವ ಶುಶ್ರೂಷಕರು-53 ಹುದ್ದೆ, ಫಾರ್ಮಾಸಿಸ್ಟ್ 50 ಹುದ್ದೆ ಹಾಗೂ ಲ್ಯಾಬ್ ಟೆಕ್ನಿಷಿಯನ್ 08 ಅರೆ ವೈದ್ಯಕೀಯ ಹುದ್ದೆಗಳನ್ನು ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್-ಇನ್-ಇಂಟರ್ವ್ಯೂವ್ (ನೇರ ಸಂದರ್ಶನ) ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಕೋವಿಡ್-19ಗೆ ಸಂಬಂಧಿಸಿದಂತೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಕಚೇರಿಯಲ್ಲಿ ಜುಲೈ 14ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನೇರ ಸಂದರ್ಶನ ಕರೆಯಲಾಗಿದ್ದು ( ವಾಕ್ ಇನ್ ಇಂಟರ್ವ್ಯೂವ್) ಅರ್ಹ ಆಸಕ್ತರು ಹಾಜರಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.