ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ. ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಸ್ವಇಚ್ಛೆಯಿಂದ ಬರಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ, ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ರಾಜ್ಯಕ್ಕೆ ಮತ್ತೆ ಅನ್ಯಾಯ ಮಾಡುತ್ತಿರುವುದು ಒಳ್ಳೆಯದಲ್ಲ... ನಾವು ಚಳವಳಿ ಹೋರಾಟ ನಡೆಸುತ್ತಿದ್ದರೂ ಕ್ಯಾರೇ ಎನ್ನುತ್ತಿಲ್ಲ... ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ಕಿಡಿ... ಕನ್ನಡಿಗರ ಶಾಂತಿ ಸಹನೆಯ ನಡೆಯನ್ನು ಕೇಂದ್ರ ಗಮನಿಸುತ್ತಿಲ್ಲ
CM Siddaramaiah: ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ ಎಂದವರು ಹೇಳಿದ್ದಾರೆ.
"ಕುಮಾರಣ್ಣ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ನಾವು ವೆಸ್ಟಂಡ್ ಹೋಟೆಲ್ನಲ್ಲಿ ಕೂತು ಸರಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಕರ್ನಾಟಕದ ʼನೀರೋʼ ಎಂದು ಕುಟುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.