Karnataka rains : ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ವರುಣನ ಅಬ್ಬರ ತೀವ್ರಗೊಳ್ಳಲಿದ್ದು, ಇಡೀ ಕರ್ನಾಟಕಕ್ಕೆ ಹವಾಮಾನ ಇಲಾಖೆ (IMD) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ಇಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತವಾಗಿರಲು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Karnataka weather update : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿತ್ತು.
ಗುರುವಾರ ರಾತ್ರಿ ಈ ಪ್ರದೇಶದಲ್ಲಿ ಭಾರೀ ಗಾಳಿ ಮತ್ತು ಮಳೆಯ ಅಬ್ಬರ ಹೆಚ್ಚಾಗಿದ್ದ ವೇಳೆ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದಿದೆ. ಪರಿಣಾಮ ಮನೆಯೊಳಗೆ ನಿದ್ದೆಯಲ್ಲಿದ್ದ ನಾಲ್ವರು ಅವಶೇಷಗಳಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Shivamogga rain today : ರಾಜ್ಯದ ಕೆಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ, ಇದೀಗ ಮತ್ತೆ ಅಬ್ಬರಿಸಲು ಶುರುಮಾಡಿದೆ. ಜಿಲ್ಲೆಯಾದ್ಯಂತ ಗುರುವಾರ ಸಂಜೆ ಭೀಕರ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಹಲವೆಡೆ ಜನಜೀವನ ತತ್ತರಿಸಿದೆ.
Karnataka today weather : ರಾಜ್ಯದಲ್ಲಿ ಬಿಸಿಲಿನ ಅಬ್ಬರ ಮತ್ತು ಮಳೆಯ ನಡುವೆ ಹವಾಮಾನ ಇಲಾಖೆ ಇಂದು (ಏಪ್ರಿಲ್ 30, 2026) ಹೊಸ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಂಭವವಿದ್ದರೆ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ..
Karnataka Weather LIVE Update Today: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು.