ಈ ಹಿನ್ನೆಲೆ ಬೋರೆದೊಡ್ಡಿ ಗ್ರಾಮದ ಸಮೀಪದ ಜಡೆತಡಿ ಹಳ್ಳ, ಲೊಕ್ಕನಹಳ್ಳಿ ಸಮೀಪದ ಹಳ್ಳಗಳು ತುಂಬಿ ಹರಿಯುತ್ತಿದೆ. ಇದರಿಂದ ಲೊಕ್ಕನಹಳ್ಳಿ ಗ್ರಾಮದಿಂದ ಒಡೆಯರಪಾಳ್ಯ ಪಿ ಜಿ ಪಾಳ್ಯ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳು ಹಾಗೂ ಒಡೆಯರಪಾಳ್ಯ ಮಾರ್ಗವಾಗಿ ಲೊಕ್ಕನಹಳ್ಳಿ ಕೊಳ್ಳೇಗಾಲ, ಹನೂರು ಪಟ್ಟಣ ವ್ಯಾಪ್ತಿಗೆ ಬರುತ್ತಿದ್ದ ಹಲವಾರು ದ್ವಿಚಕ್ರ ವಾಹನ, ಬಸ್, ಸರಕು ಸಾಗಣೆ ವಾಹನಗಳು ನಿಂತಲ್ಲಿ ನಿಂತಿದ್ದು ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಂಚಾರ ಸ್ಥಗಿತವಾಗಿದೆ.
ಆನೇಕಲ್ ತಾಲ್ಲೂಕಿನಾದ್ಯಂತ ಮಳೆರಾಯನ ಆರ್ಭಟ
ಕಳೆದೊಂದು ಗಂಟೆಯಿಂದ ಗುಡುಗು ಸಹಿತ ಭಾರಿ ಮಳೆ
ಚಂದಾಪುರ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಳೆ
ಸಂಜೆಯಾಗುತ್ತಿದ್ದಂತೆ ಮೋಡಕವಿದ ವಾತಾವರಣ
ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಮುಂದಿನ ಏಳು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಜೊತೆಗೆ ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರದ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ.
Karnataka Weather Forecast : ಕರ್ನಾಟಕದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇದರ ನಡುವೆ ಮೇ 23ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.