ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿ. ಧಾರಾಕಾರ ಮಳೆಯಿಂದಾಗಿ ನರಸಿಂಹವಾಡಿಯ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ಪ್ರವೇಶ ಮಾಡಿದೆ. ನರಸಿಂಹವಾಡಿ ದೂಧಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ಇದಾಗಿದೆ.
ರಾಜ್ಯದ ಹಲವು ಕಡೆ ಧಾರಾಕಾರ ಮಳೆ ಮುಂದುವರಿದಿದೆ.. ಕಳೆದ 1 ವಾರದಿಂದ ಸರಿಯುತ್ತಿರುವ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.. ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯ ಎಡೆಬಿಡದೇ ಅಬ್ಬರಿಸುತ್ತಿದ್ದಾನೆ.. ಇತ್ತ ಮಹಾರಾಷ್ಟ್ರದಲ್ಲೂ ವರುಣನ ಅಬ್ಬರ ಜೋರಾಗಿತ್ತು ಮತ್ತೆ ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರವಾಹದ ಭೀತಿ ಉಂಟಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ KRS ಡ್ಯಾಂ ಭರ್ತಿಗೆ ಕೇವಲ ಇನ್ನು 3 ಅಡಿ ಬಾಕಿ ಉಳಿದಿದೆ. KRSಗೆ ಒಳಹರಿವಿನ ಪ್ರಮಾಣ 34304 ಕ್ಯೂಸೆಕ್ ಇದ್ದು, ಡ್ಯಾಂನ ನೀರಿನ ಮಟ್ಟ 121.42 ಅಡಿ ದಾಟಿದೆ. KRS ಹೊರಹರಿವಿನ ಪ್ರಮಾಣ 3207 ಕ್ಯೂಸೆಕ್ ಇದೆ.
ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಈಗಾಗಲೇ ರಜೆ ಘೋಷಿಸಲಾಗಿದ್ದು, ಇವತ್ತು ಕೂಡ ರಜೆ ಮುಂದುವರಿಯಲಿದೆ. ಇವತ್ತು ಶಿವಮೊಗ್ಗ, ಸೊರಬ, ಶಿಕಾರಿಪುರ ಮತ್ತು ಭದ್ರಾವತಿಯಲ್ಲಿ ರಜೆ ಘೋಷಿಸಲಾಗಿದೆ.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಫಸಲಿಗೆ ಬಂದ ಜಮೀನುಗಳಲ್ಲಿ ನೀರು ನಿಂತು ರಾಜ್ಯದ ರೈತ ಕಂಗಾಲಾಗಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಸಹ ಹಿಂದೆ ಮುಂದೆ ಯೋಚಿಸುವಂತಾಗಿದೆ. ಇನ್ನೂ ಕೆಲ ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿದ ಪರಿಣಾಮ ಕರೆಂಟ್ ಇಲ್ಲದೆ ಜನ ಪರದಾಡುವಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.