ಯಳಂದೂರಿನಲ್ಲಿರುವ ವಲಯ ಅರಣ್ಯ ಇಲಾಖೆ, ಚೆಸ್ಕಾಂ ಇಲಾಖೆ, ಪದವಿಪೂರ್ವ ಕಾಲೇಜು, ಮಾರಮ್ಮನ ದೇವಾಲಯ, ಪೊಲೀಸ್ ವಸತಿ ಗೃಹ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸಿ ಮಂದಿರ ಪ್ರವಾಸಿ ಮಂದಿರದ ವಸತಿಗೃಹ ಸಂಪೂರ್ಣ ಜಲಾವೃತಗೊಂಡಿದ್ದು ಯಾರೂ ಕಾಲಿಡಲಾಗದ ಸ್ಥಿತಿ ಇದೆ.
Tejaswi Surya : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಕ್ಕರೆ ನಾಡಲ್ಲಿ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಮದ್ದೂರು ತಾಲೂಕಿನ ಕದಲೂರು ಗ್ರಾಮ ಮಳೆಯಿಂದ ಜಲಾವೃತವಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ಇಲ್ಲದೆ ಗ್ರಾಮಕ್ಕೆ ಮಳೆ ನೀರು ನುಗ್ಗಿದೆ.
ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಸೇತುವೆಗಳು ಜಲಾವೃತ.. ಗ್ರಾಮ ಗ್ರಾಮಗಳ ಸಂಪರ್ಕ ಕಡಿತ ತೆಂಗು.. ಬಾಳೆ.. ಅಡಿಕೆ.. ಸೇರಿ ಎಲ್ಲಾ ಬೆಳೆಯು ಜಲಾವೃತ ಜಲಾಶಯಗಳು ಭರ್ತಿ.. ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಕರಾವಳಿಯಲ್ಲಿ ಕುಸಿಯುತ್ತಿವೆ ಗುಡ್ಡ.. ಮನೆಗಳು ನಾಶ..!
ರಾಜ್ಯದಲ್ಲಿ ಮಳೆ ಅಬ್ಬರ ನಿಲ್ಲುವಂತೆ ಕಾಣುತ್ತಿಲ್ಲ. ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.