ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರವು ಉದಾಸೀನ ತೋರಿಸುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಲ್ಲಿ ಹುರುಳಿಲ್ಲ. ನಮ್ಮ ವಕೀಲರ ತಂಡ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಹೆಜ್ಜೆಗಳನ್ನು ಇಡುತ್ತಿದೆ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ ಸೂತ್ರ ರಚನೆಗೆ ಇಷ್ಟು ಹೊತ್ತಿಗೆ ರಾಜ್ಯ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಬೇಕಿತ್ತು.
Cauvery Dispute: ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿಯಾಗಿ ನಿಲ್ಲಬೇಕು- ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಈಗಾಗಲೇ ಸರ್ವಪಕ್ಷ ಸಭೆ ನಡೆಸಿದ್ದಾರೆ. ಚರ್ಚೆಗಾಗಿ ಪ್ರಧಾನಮಂತ್ರಿಯವರ ಸಮಯ ಕೇಳಿದ್ದರೂ ಅವರಿನ್ನೂ ಸಮಯ ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿಯ ಇತರ ಸಂಸದರು ಇವರೆಲ್ಲಾ ಸೇರಿ ಪ್ರಧಾನಿಯವರ ಜೊತೆ ಚರ್ಚೆಗೆ ಸಮಯ ನಿಗದಿಪಡಿಸಲು ಮುಂದಾಗಬೇಕು- ಸಚಿವ ಎಂ.ಬಿ ಪಾಟೀಲ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.