ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸಂಘದಿಂದ ಸಮ್ಮಿಲನ ಕಾರ್ಯಕ್ರಮ ನಡೆಯಿತು.. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಸಂತ ನಾಡಿಗೇರ, ಕವಿಪವಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು.
ಕವಿಪವಿ ಕೂಟದಲ್ಲಿ ಹಳೆ ಬೇರು ಹೊಸ ಚಿಗುರು ಕೂಡಿರಬೇಕು ಎಂಬ ಉದ್ದೇಶದಿಂದ ಈ ಹೊಸತನಕ್ಕೆ ನಾಂದಿ ಹಾಡಲಾಗಿದೆ. ತಮ್ಮ ಸಂಪೂರ್ಣ ಸಹಕಾರ ಹಾಗೂ ಬೆಂಬಲ ಹೀಗೆ ಹೊಸ ತಂಡಕ್ಕೆ ಮುಂದುವರಿಯಲಿ ಎಂದು ಈ ಮೂಲಕ ವಿನಂತಿಸಲಾಗಿದೆ.
ನಿಂಗಯ್ಯ ಒಡೆಯರ ಎಂಬ 80 ದಾಟಿದ ಅಜ್ಜ ಈಗ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿದ್ದು ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ.
ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣದಲ್ಲಿ ತನ್ನದೇ ಆದ ಕಿರ್ತಿ ಗಳಿಸಿ, ಐತಿಹಾಸಿಕ ಪರಂಪರೆಯನ್ನು ಹೊಂದಿರುವ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಮೂರು ಗಣ್ಯ ಸಾಧಕರಿಗೆ ಪ್ರಥಮ ಬಾರಿಗೆ ರಾಜ್ಯಮಟ್ಟದ ಅರವೇ ಗುರು ಪ್ರಶಸ್ತಿಯನ್ನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು ಎಂದು ಕವಿವಿ ಕುಲಪತಿ ಕೆ.ಬಿ.ಗುಡಸಿ ಅವರು ತಿಳಿಸಿದರು.
ನೃಪತುಂಗ ವಿವಿ ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ ಸಮಾರಂಭವನ್ನಾಗಿ ಮಾಡಿ, ಸ್ಮರಣೀಯಗೊಳಿಸಲಾಗುವುದು. ಸರಕಾರಿ ಕಲಾ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ಸಾವಿರ ಜನ ಭಾಗವಹಿಸಲಿದ್ದಾರೆ.
ಕವಿ,ನಾಡೋಜ ಡಾ.ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್ಡಿಎಂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಸ್ವರ್ಣಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.