Karnataka Weather Updates:ರಾಜ್ಯದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ: ಹೈಅಲರ್ಟ್ ಜಾರಿ
Karnataka NewsUpdates: ಕರಾವಳಿ ಜಿಲ್ಲೆಯಲ್ಲಿ ಜೂನ್ 21 ರಿಂದ 25 ರವರೆಗೆ ಭಾರೀ ಮಳೆ
ಈ ಅವಧಿಯಲ್ಲಿ ಮಳೆಯಿಂದಾಗಿ ನೀರಿನ ಹರಿವು, ಕಡಿದಾದ ತಗ್ಗು ಪ್ರದೇಶಗಳಲ್ಲಿ ನೀರು ನಿಂತುಬಿಡುವುದು, ಸಣ್ಣ ಪ್ರಮಾಣದ ಪ್ರವಾಹ ಮತ್ತು ಇತರ ವಿಪತ್ತುಗಳ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದಿರುವಂತೆ KSNDMC ಸಲಹೆ ನೀಡಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ಜೂನ್ 22 ರವರೆಗೆ ಬೆಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈಗಾಗಲೇ ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಕಾರಾವಾರ, ಮಂಗಳೂರು ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡು ಭಾಗಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಳೆ ಜೊತೆ ಜೋರಾದ ಗಾಳಿ ಕೂಡ ಬೀಸಲಿದೆ. ಇನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಕೆ ಆಗಬೇಕು. ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆ ಆಗಬಾರದು ಎಂದು ಸರ್ಕಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಜಿಬಿಎಯ ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೃಷ್ಣಬೈರೇಗೌಡ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ಮುಂದಿನ 2-3 ದಿನಗಳ ಕಾಲ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ತಮಿಳುನಾಡು ಸಿಎಂ ವಿಜಯ್ ಅವರು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿರುವ ಪ್ರಸಿದ್ಧ ಶ್ರೀ ಮೂಕಾಂಬಿಕಾ ಸನ್ನಿಧಿಗೆ ಭೇಟಿ ನೀಡಲಿದ್ದಾರೆ..ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್ಗೆ ಇಂದಿನಿಂದ ಅರ್ಜಿ ಶುರುವಾಗಿದೆ. ಮುಂಗಾರು ಮಳೆಯ ಪ್ರಭಾವದಿಂದ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸುಧಾರಣೆಗೊಂಡಿದೆ.
Karnataka Rains Alert LIVE 11 June 2026 : ಯಾವುದೇ ಮೆಟ್ರೋ ಯೋಜನೆಗೆ ಅನುಮೋದನೆ ನೀಡಲು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಮಾನದಂಡ ಶೇ. 14 ಆಗಿದೆ. RITES ಅಂದಾಜಿಸಿರುವ ಪ್ರಮಾಣವು ಈ ಮಾನದಂಡಕ್ಕಿಂತ ಹೆಚ್ಚಿರುವುದರಿಂದ ಯೋಜನೆಗೆ ತಾಂತ್ರಿಕವಾಗಿ ಯಾವುದೇ ಅಡ್ಡಿ ಇರುವುದಿಲ್ಲ ಎನ್ನಲಾಗಿದೆ.
Karnataka News LIVE 10 June 2026: ನಟಿ ಹಾಗೂ ಬಿಗ್ಬಾಸ್ ಖ್ಯಾತಿಯ ಶುಭಾ ಪೂಂಜಾ ಅವರು ಡಿವೋರ್ಸ್ ವಿಚಾರ ಬೆನ್ನಲ್ಲೇ ದಿಢೀರ್ ಪೋಸ್ಟ್ ಹಂಚಿಕೊಂಡಿದ್ದಾರೆ.. ಇತ್ತ ಶಾಲಾ ಕಟ್ಟಡದಿಂದ ಬಿದ್ದು 15 ವರ್ಷದ ಬಾಲಕ ಮೃತಪಟ್ಟಿದ್ದಾನೆ.ರೇಣುಕಾಸ್ವಾಮಿ ಕೇಸ್ ಸಂಬಂಧಪಟ್ಟಂತೆ ದರ್ಶನ್ನ ಗ್ಯಾಂಗ್ನ ಐವರು ಆರೋಪಿಗಳ ಜಾಮೀನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಕರುನಾಡಿನಲ್ಲಿ ನೈಋತ್ಯ ಮಾನ್ಸೂನ್ ಮುಂದುವರೆದಿದ್ದು, ಬೆಂಗಳೂರು ಸೇರಿದಂತೆ ಕರಾವಳಿ ಭಾಗದಲಿ ಭಾರೀ ಮಳೆಯಾಗಲಿದ್ದು, ಐಎಂಡಿ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ನೀಡಿದೆ. ಇತ್ತ ಶಕ್ತಿಯೋಜನೆಯನ್ನ ಮತ್ತಷ್ಟು ಪರಿಣಾಮಗೊಳಿಸುವ ಸಲುವಾಗಿ ಮಹಿಳೆಯರಿಗೂ ಸೇರಿ ರಾಜ್ಯದ ಮೂರು ಕೋಟಿ ಸಾರಿಗೆ ಪ್ರಯಾಣಿಕರಿಗೂ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಸಾರಿ ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದರು. ಅತ್ತ ಸಿಎಂ ಡಿ.ಕೆ ಶಿವಕುಮಾರ್ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು