ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಪದೇ ಪದೆ ಎಡವುತ್ತಿದೆ. ಕಾವೇರಿ ಟ್ರಿಬ್ಯೂನಲ್ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
Kaveri River water dispute: ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಅಂತಾ ಡಿಕೆಶಿ ತಿಳಿಸಿದರು.
Kaveri River water dispute: ತಮಿಳುನಾಡಿನವರು 12 ಸಾವಿರ ಕ್ಯೂಸೆಕ್ಸ್ ಬೇಡಿಕೆ ಇಟ್ಟಿದ್ದರು. ಅದನ್ನು 5 ಸಾವಿರ ಕ್ಯೂಸೆಕ್ಸ್ ಗೆ ಇಳಿಸಿದ್ದಾರೆ. ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಿ ನಂತರ ರೈತರಿಗೆ ಹರಿಸುವ ಬಗ್ಗೆ ಯೋಚನೆ ಮಾಡುತ್ತೇವೆ. ಬೆಂಗಳೂರಿಗೆ ಮಳೆ ಬಿದ್ದಾಗ ಆಶಾಭಾವನೆ ಮೂಡಿತ್ತು, ಈಗ ಮಳೆ ಬರದೆ ಸಂಕಷ್ಟ ಎದುರಾಗಿದೆ ಎಂದು ಡಿಕೆಶಿ ತಿಳಿಸಿದರು.
Kaveri River water dispute: ಮುಂದಿನ ವಾರ ಸುಪ್ರೀಂಕೊರ್ಟ್ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ, ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.
Kaveri River water dispute: KRS ಡ್ಯಾಂನಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಇದ್ದು, ಇನ್ನುಳಿದ 12 ಟಿಎಂಸಿ ನೀರು ಮಾತ್ರ ಕುಡಿಯಲು ಬಳಕೆಗೆ ಯೋಗ್ಯವಾಗಿರಲಿದೆ. ಕನಿಷ್ಠ ಮಟ್ಟದಲ್ಲಿರುವ ನೀರನ್ನು ತಮಿಳುನಾಡಿಗೆ ಹರಿಬಿಟ್ಟರೆ ಬೆಂಗಳೂರಿಗೆ ಕಾವೇರಿ ನೀರಿನ ಅಭಾವ ಫಿಕ್ಸ್ ಆಗಲಿದೆ.
Kaveri River water dispute: ಭತ್ತ ನಾಟಿ ಮಾಡಿರುವ ಕಾವೇರಿ ಕೊಳ್ಳದ ರೈತರು ಒಣಗುತ್ತಿರುವ ಬೆಳೆ ನೋಡಿ ಕಣ್ಣೀರು ಸುರಿಸುತ್ತಿದ್ದಾರೆ. ಇದಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೇ 30 ಟಿಎಂಸಿ ನೀರು ಬೇಕು. ಈ ಯಾವ ಅಂಶಗಳನ್ನೂ ಕಾಂಗ್ರೆಸ್ ಸರ್ಕಾರ ಸಮರ್ಥವಾಗಿ ನ್ಯಾಯಾಧಿಕರಣಕ್ಕೆ ಅರಿಕೆ ಮಾಡುವಲ್ಲಿ ಸೋತು ಕನ್ನಡಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಬಿಜೆಪಿ ಕುಟುಕಿದೆ.
5 ವರ್ಷ ಸರ್ಕಾರ ಮಾಡಿ ಎತ್ತಿನಹೊಳೆ ಹೆಸರಿನಲ್ಲಿ ಕೊಳ್ಳೆ ಹೊಡೆದ ಗಿರಾಕಿಗಳು, ಆ ನಂತರ ಕೆಸಿ ವ್ಯಾಲಿಯ ವಿಷ ನೀರು ಹರಿಸಿ, ಈಗ ಚುನಾವಣೆ ಹೊತ್ತಿನಲ್ಲಿ ಕಾವೇರಿ ಎಂದು ಸುಳ್ಳು ಹೇಳುವುದು ಎಷ್ಟು ಸರಿ? ಎಂದು ಕೃಷ್ಣಭೈರೇಗೌಡಗೆ ಎಚ್ಡಿಕೆ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.