ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ವಿವಿಧ ಮಾವಿನ ತಳಿಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮೇ 23ರಿಂದ ಮೇ 31ರವರೆಗೆ 10 ದಿನಗಳ ಕಾಲ ತೋಟಗಾರಿಕಾ ಇಲಾಖಾ ಆವರಣದಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ 12ಕ್ಕೂ ಹೆಚ್ಚಿನ ಮಾವಿನ ತಳಿಗಳನ್ನು ರೈತರು ನೇರವಾಗಿ ಮಾರಾಟ ಮಾಡಲು ಅನುಕೂಲ ಕಲ್ಪಿಸಲಾಗಿದೆ.
Koppal Assembly Election Result 2023: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಮತ್ತು ಜಾತಿಗಿಂತ ವ್ಯಕ್ತಿ ಮುಖ್ಯವೆಂಬುದು ಹಲವು ಬಾರಿ ಸಾಬೀತಾಗಿದೆ. ನಿರ್ಣಾಯಕವಲ್ಲದ ಸಮುದಾಯದವರೂ ಗೆದ್ದಿರುವ ಉದಾಹರಣೆ ಇದೆ.
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 13ರಂದು ನಡೆಯಲಿರುವ ಮತ ಎಣಿಕೆ ಸಂಬಂಧವಾಗಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ಮೇ 12ರ ಸಂಜೆ 6ರಿಂದ ಮೇ 13ರ ರಾತ್ರಿ 11 ಗಂಟೆಯವರೆಗೆ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
ಮತದಾನ ಜಾಗೃತಿ ಚಟುವಟಿಕೆಯಲ್ಲಿ ರಾಜ್ಯದಲ್ಲಿಯೇ ಗಮನ ಸೆಳೆದ ಕೊಪ್ಪಳ ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಿದ್ದು, ನರೇಗಾ ಕೂಲಿ ಕಾರ್ಮಿಕರು ಇರುವ ಕಡೆಗೆ ಸಂಚರಿಸಿ ಅವರಿಗೆ ಮತದಾನ ಜಾಗೃತಿ ಪಾಠ ಹೇಳಲಾಯಿತು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಜೆಪಿ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಕೊಪ್ಪಳ ಜಿಲ್ಲೆ ಕನಕಗಿರಿ ವಿಧಾನಸಭಾ ಕ್ಷೇತ್ರದ ಆದಾಪೂರ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಕೊಠಡಿ ಕೊರತೆ ಹಿನ್ನೆಲೆಯಲ್ಲಿ ಆದಾಪೂರ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಿದ್ರೆ ಚುನಾವಣೆಯಲ್ಲಿ ಭಾಗಿ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ನೀಡ್ಬೇಕಿದೆ. ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ಕೊಟ್ಟಿದ್ದು ಕಾಂಗ್ರೆಸ್. ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಕರೆಂಟ್ ಇರಲಿಲ್ಲ ಎಂದು ಕೊಪ್ಪಳದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ರು.
ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಿದ್ದು ಕಾಂಗ್ರೆಸ್ ಒಂದೇ ಕೋಮಿಗೆ ಶಾದಿ ಭಾಗ್ಯ ನೀಡಿದ್ದು ಸಿದ್ದರಾಮಯ್ಯ ಎಂದು ಕೊಪ್ಪಳದಲ್ಲಿ ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ಕಿಡಿಕಾರಿದ್ರು.
ಶಾಸಕ ದಡೇಸೂಗೂರು ಐಶಾರಾಮಿ ಕಾರ್ ಬಿಟ್ಟು ಗ್ರಾಮದಲ್ಲಿ ಬೈಕ್ ಏರಿ ಬಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಬೈಕ್ನಲ್ಲೇ ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರ ಸಂಚಾರ ಮಾಡಿದ್ದಾರೆ. ಶಾಸಕ ದಡೇಸೂಗೂರು ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೊಸಪೇಟೆ, ಕೊಪ್ಪಳದಲ್ಲಿ ಕಾಂಗ್ರೆಸ್ ಬಸ್ ಯಾತ್ರೆ ನಡೆಯಲಿದೆ. ಸಿದ್ದರಾಮಯ್ಯ, ಡಿಕೆಶಿ, ಬಿ.ಕೆ ಹರಿಪ್ರಸಾದ್, ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಜನವರಿ 08 ರಂದು ನಡೆಯಲಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರೆಗೆ ಹೆಚ್ಚಿನ ಜನಸಂದಣಿಯನ್ನು ನಿರೀಕ್ಷಿಸಿ ಕ.ಕ.ರ.ಸಾ ನಿಗಮದಿಂದ ಕೊಪ್ಪಳ ಕೇಂದ್ರ ಬಸ್ ನಿಲ್ದಾಣ ಹಾಗೂ ಕೊಪ್ಪಳದ ಇತರೆ ಕಡೆಗಳಿಂದ ಸಾರ್ವಜನಿಕ ಭಕ್ತಾಧಿಗಳಿಗೆ ಹೆಚ್ಚಿನ ಸಾರಿಗೆ ಸೌಕರ್ಯವನ್ನು ಕಲ್ಪಿಸಲಾಗುರುತ್ತದೆ.
ಯಾವುದೇ ಪಂಥಗಳಿಲ್ಲದ ಗ್ರಂಥಕ್ಕೆ ಅಂಟಿಕೊಳ್ಳದ ಜನರ ಹೃದಯ ಗ್ರಂಥಿಗಳಲ್ಲಿ ಉಳಿದ ಸಂತ-ವಸಂತ, ಮಾಯ ಮುಟ್ಟದ ಕಾಯ ಭ್ರಮೆಯಿಲ್ಲದ ಭಾವ ಲೋಕಾಂತವನ್ನ ಪ್ರೀತಿಸಿ ತಾವು ಏಕಾಂತವಾಗಿ ಉಳಿದವರು ಎಂದು ಸಿದ್ದೇಶ್ವರ ಶ್ರೀಗಳ ಬಗ್ಗೆ ಅದ್ಬುತ ಸಾಲುಗಳನ್ನ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.