ಇದೇ ಮೊದಲಿಗೆ ಕಲಾಪಕ್ಕೆ ಶಾಸಕ ಈಶ್ವರಪ್ಪ ಗೈರು, ಬೆಳಗಾವಿ ಅಧಿವೇಶನಕ್ಕೆ ಮಾಜಿ ಸಚಿವ ಈಶ್ವರಪ್ಪ ಗೈರು, ಸಚಿವ ಸಂಪುಟ ಸೇರಲು ಬಹಿರಂಗ ಬೇಡಿಕೆಯಿಟ್ಟ ಈಶ್ವರಪ್ಪ, ಜಾರ್ಜ್ ಪ್ರಕರಣ ಉದಾಹರಣೆ ಕೊಟ್ಟು ಮಂತ್ರಿಗಿರಿಗೆ ಪಟ್ಟು
ಸಚಿವ ಸ್ಥಾನ ನೀಡಿ ಎಂದು ಪಟ್ಟು ಹಿಡಿದ ಈಶರಪ್ಪ. ಬೆಂಗಳೂರಿನಲ್ಲಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ. ಬಿಜೆಪಿ ಬೆಳವಣಿಗೆಗಾಗಿ ರಾಜ್ಯದಲ್ಲಿ ಸಾಕಷ್ಟು ದುಡಿದಿದ್ದೇನೆ. ರಾಜ್ಯಾದ್ಯಂತ ಪಕ್ಷ ಸಂಘಟಿಸುವಲ್ಲಿ ನನ್ನ ಪಾತ್ರ ಕೂಡ ಇದೆ. ನನ್ನ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದೇನೆ. ನನ್ನ ವಿರುದ್ಧದ ಆರೋಪಕ್ಕೆ ಕ್ಲೀನ್ ಚಿಟ್ ಸಿಕ್ಕು 4 ತಿಂಗಳು ಆಗಿದೆ ಎಂದಿದ್ಧಾರೆ.
ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ ಆರೋಪಕ್ಕೆ ಗುರಿಯಾಗಿದ್ದ ಕೆ.ಎಸ್.ಈಶ್ವರಪ್ಪನವರು ತಮ್ಮ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪಗಳು ಕೇಳಿಬರುತ್ತಲೇ ಇವೆ. ಇದೀಗ ಇದೇ ವಿಚಾರವಾಗಿ ಈಶ್ವರಪ್ಪ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ದೇಶಪ್ರೇಮವಿರುವ ಬಹಳಷ್ಟು ಮಂದಿ ಮುಸ್ಲಿಂರಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ನಾನು ಮುಸ್ಲಿಂ ವಿರೋಧಿಯೂಲ್ಲ.. ದ್ವೇಷಿಯೂ ಅಲ್ಲ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸಿದ್ದರಾಮಯ್ಯ ಜತೆ ಟ್ವೀಟ್ ವಾರ್ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪನವರು, ಕಾಂಗ್ರೆಸ್ ನ ಕಾರ್ಪೊರೇಟರ್ ಗಂಡ ಸಾವರ್ಕರ್ ಫೋಟೋ ಹರಿದು ಹಾಕಿದ್ದಾರೆ. ಇದು ಗೊತ್ತಿದ್ದರೂ ಸಿದ್ದರಾಮಯ್ಯ, ಡಿಕೆಶಿಗೆ ಕ್ಷಮೆ ಕೇಳುವ ಸೌಜನ್ಯ ಇಲ್ಲ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ಗೆ ಚಾಕು ಇರಿತ ಘಟನೆಯನ್ನು ಮಾಜಿ ಸಚಿವ ಈಶ್ವರಪ್ಪ ಖಂಡಿಸಿದ್ದಾರೆ. ಮುಸ್ಲಿಂ ಗೂಂಡಾಗಳು ಚಾಕು ಇರಿದಿದ್ದಾರೆ. ಸಾವರ್ಕರ್ಗೂ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಸಿದ್ದರಾಮಯ್ಯ ಅವರು 75 ವರ್ಷದ ಹುಟ್ಟು ಹಬ್ಬ ಆಚರಣೆ ಮಾಡಿದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇಡೀ ರಾಜ್ಯದ ಜನ ಅವರಿಗೆ ಒಳ್ಳೆಯದಾಗಲಿ ಅಂತಾ ಶುಭ ಕೋರಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ತಾಕತ್ತಿದ್ದರೆ ಹೈಕೋರ್ಟ್, ಸುಪ್ರಿಂಕೋರ್ಟ್ ಗೆ ಹೋಗಿ ಯಶಸ್ವಿಯಾಗಿ ಬರಲಿ. ಗೆದ್ದು ಬಂದ್ರೆ ಅವರು ಹೇಳಿದ ಹಾಗೆ ಮಾಡ್ತೀನಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಡಿಕೆ ಶಿವಕುಮಾರ್ ಬಿ ರಿಪೋರ್ಟ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
PSI ಅಕ್ರಮ ನೇಮಕಾತಿ ಹಗರಣದಲ್ಲಿ ಅಶೋಕ್, ಆರಗ ಜ್ಞಾನೇಂದ್ರ, ವಿಜಯೇಂದ್ರ ಹೆಸರು ಕೇಳಿ ಬರ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಯಾಗಲಿ ಎಂದು ನಾನು ಹೇಳಿದ್ದೇನೆ. ನನಗೆ ಇರೋ ಮಾಹಿತಿ ಮೇಲೆ ಕೇಳಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.