ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ, ಡಿಪ್ಲೋಮಾ, ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಹಾಗೂ ಶುಲ್ಕ ಪಾವತಿಸಲು ಮಾರ್ಚ್ 31, 2024 ರಂದು ಕೊನೆಯ ದಿನವಾಗಿದೆ.
Coaching for PU CET NEET exams: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆಸಕ್ತರು ತರಬೇತಿಗೆ ನೋಂದಾಯಿಸಿಕೊಳ್ಳಬಹುದು.
ಮೈಸೂರು ಜಿಲ್ಲೆಯ ವಿದ್ಯಾರ್ಥಿಯೋರ್ವ ನೀಡಿದ ದೂರಿನ ಆಧಾರದ ಮೇಲೆ ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಪರೀಕ್ಷೆ ಹಿಂದಿನ ದಿನ ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಹಣವನ್ನು ಪಡೆಯುತ್ತಿದ್ದ ಜಾಲವನ್ನು ಬೆಳಕಿಗೆ ತಂದಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಜುಲೈ ಆವೃತ್ತಿಯ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಬಿ.ಲಿಬ್.ಸೈನ್ಸ್, ಎಂ.ಲಿಬ್.ಸೈನ್ಸ್, ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಎಂ.ಸಿ.ಎ., ಡಿಪ್ಲೋಮಾ, ಕೋರ್ಸ್ಗಳ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭಗೊಂಡಿವೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡುತ್ತಿದ್ದು, ಆಸಕ್ತರು ನೊಂದಾಯಿಸಿಕೊಳ್ಳಬಹುದು.
ಆಸಕ್ತರು ಫೆ.15, 2023ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್ ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮೀಸ್ಟರ್ ಪರೀಕ್ಷೆಗಳನ್ನು ಮಾರ್ಚ್ 21 ರಿಂದ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಅಂತರ್ಜಾಲದಲ್ಲಿ ಪ್ರಕಟಿಸಲಾಗಿತ್ತು.
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ ಮತ್ತು ಎಲ್.ಎಲ್.ಎಂ, ಎಂ.ಬಿ.ಎ (ಲಾ), ಎಂ.ಟಿ.ಎಂ ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳು ಹಾಗು 2020-21ನೇ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಎ/ಬಿ.ಕಾಂ, ಬಿ.ಎಲ್.ಐ.ಎಸ್ಸಿ, ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಲ್ಲಾ ಎಂ.ಎಸ್ಸಿ ಮತ್ತು ಎಲ್ಲಾ ಸ್ನಾತಕ/ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ರೂ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ 45 ದಿನಗಳ ತರಬೇತಿ ಶಿಬಿರವನ್ನು ನಡೆಸಲು ನಿರ್ಧರಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಂದು ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಓಯು ಸ್ಟೂಡೆಂಟ್ ಅಪ್ಲಿಕೇಶನ್ ಆವಿಷ್ಕಾರ ಮಾಡಲಾಗಿದೆ. ಇದರಲ್ಲಿ ಹಲವಾರು ಮಾಹಿತಿ ಸಂಗ್ರಹಿಸಲಾಗಿದೆ. ಡಿಜಿಟಲೀಕರಣ ಮೂಲಕ ವಿದ್ಯಾರ್ಥಿಗಳಿಗೆ ನಾವು ಆನ್ಲೈನ್ ಸೇವೆಗಳನ್ನು ನೀಡುತ್ತಿದ್ದೇವೆ. ಪಠ್ಯದ ನೋಟ್ಸ್ಗಳನ್ನ ಸಹ ಆ್ಯಪ್ನಲ್ಲಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳ ಪ್ರವೇಶಾತಿ, ವಿಡಿಯೋ ಮೂಲಕ ತರಬೇತಿ, ರೆಡಿಯೋ ಪಾಠಗಳು ಸೇರಿದಂತೆ ಇನ್ನೂ ಅನೇಕ ವಿಶೇಷತೆಯೊಂದಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್ ಎಸ್. ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.