Accident compensation: KSRTC ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆಯಡಿ ತನ್ನ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ (on Duty and Off Duty)ಯನ್ನು ಜಾರಿಗೊಳಿಸಿದೆ.
Karnataka Shakti Scheme: ಜೂನ್ 11ರಿಂದ ಜುಲೈ 10ರ ತನಕ 4 ಸಾರಿಗೆ ಸಂಸ್ಥೆಗಳಾದ KSRTC, BMTC, NWKRTC ಮತ್ತು KKRTC ಬಸ್ಗಳಲ್ಲಿ ಒಟ್ಟು 32.89 ಕೋಟಿ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಇಡೀ ಸದನ ರಣರಂಗವಾಯಿತು.
Transport Department Recruitment: KSRTCಯಲ್ಲಿ 3,745 ಚಾಲನಾ ಸಿಬ್ಬಂದಿ, 726 ತಾಂತ್ರಿಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿದೆ. ಹೊಸದಾಗಿ 1,433 ಚಾಲನಾ ಸಿಬ್ಬಂದಿ, 2,738 ತಾಂತ್ರಿಕ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
Karnataka Shakti Scheme: ಜೂನ್ 11 ರಿಂದ ಜೂನ್ 28ರವರೆಗೆ 4 ನಿಗಮದ ಬಸ್ಗಳಲ್ಲಿ ಒಟ್ಟು 9,46,35,508 ಮಹಿಳೆಯರು ಪ್ರಯಾಣ ನಡೆಸಿಒದ್ದಾರೆ. ಈ ಎಲ್ಲಾ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು ₹222,00,79,232 ಆಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.
Money Theft : ಹಣ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳನನ್ನು ಕೆಎಸ್ಆರ್ಟಿಸಿ ನಿರ್ವಾಹಕ, ಚಾಲಕ ಚೇಸ್ ಮಾಡಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಳಕಿಗೆ ಬಂದಿದೆ. ಹಣ ಕದ್ದು ಪರಾರಿಯಾಗುತ್ತಿದ್ದ ಆರೋಪಿ ಶಾಹಾ ಅಲಾಂ ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಚಳ್ಳಕೆರೆಯಲ್ಲಿ ಮಹಿಳಾ ಪ್ರಯಾಣಿಕರು ಮತ್ತು ಆಕೆಯ ಮೂವರು ಸಂಬಂಧಿಕರು ಕೆಎಸ್ಆರ್ಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೊಳ್ಳೇಗಾಲದಿಂದ ಗೊರವನಹಳ್ಳಿ ಲಕ್ಷ್ಮೀ ದರ್ಶನಕ್ಕೆ ಬಂದಿದ್ದ ಮಹಿಳೆಯರು-ಮಕ್ಕಳು
ನಿನ್ನೆ ಸಂಜೆಯಿಂದ 2 ತಾಸು ಕಾದರೂ ಬಸ್ ನಿಲ್ಲಿಸದ ಕಾರಣ ಬಸ್ ತಡೆದ ಮಹಿಳೆಯರು
ಚಾಲಕನ ವರ್ತನೆ ಬಗ್ಗೆ ಸ್ಥಳೀಯರ ದೂರಿಗೆ ಸ್ಥಳಕ್ಕೆ ಸಿಬ್ಬಂದಿ ಸಹಿತ ಬಂದ ತಹಶೀಲ್ದಾರ್
ಮಹಿಳೆಯರು ಕೆಎಸ್ಆರ್ಟಿಸಿ ಬಸ್ ಗಳತ್ತ ಹೆಚ್ಚಾಗಿ ಮುಖ ಮಾಡುತ್ತಿದ್ದು, ಅವರೊಂದಿಗೆ ಪುರಷರು ಕೂಡ ಹೋಗುತ್ತಿದ್ದಾರೆ. ಹೀಗಾಗಿ, ಖಾಸಗಿ ಬಸ್ ಗಳ ಮೇಲೆ ಭಾರಿ ಹೊಡೆತ ಬಿದ್ದಂತಾಗಿದೆ. ಇನ್ನು, ದಾವಣಗೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕೂಡ ತೀರಾ ಕಡಿಮೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.