Gruhalakshmi: ರಾಜ್ಯದ ಗೃಹಿಣಿಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2000 ರೂ. ಹಣ ಪಡೆಯುತ್ತಿದ್ದಾರೆ. ಇದೀಗ ಹಣ ಪಡೆಯುತ್ತಿರುವ ಗೃಹಿಣಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಘೋಷಣೆ ಮಾಡಿದ್ದಾರೆ.
Gruhalakshmi Scheme Updates: ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಹಣ ಬಿಡುಗಡೆಯಾಗಿದ್ದು, ಬಾಕಿ ಉಳಿದಿರುವ ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ.
Gruha Lakshmi Yojana: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ ಹಂತವಾಗಿ ಎಲ್ಲಾ ಮಹಿಳೆಯರಿಗೆ ಪೆಂಡಿಂಗ್ ಹಣ ಒಂದೇ ಸಾರಿ 4,000 ರೂ. ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ.
Gruhalakshmi Scheme: ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ ಸಹ ವರ್ಗಾವಣೆ ಮಾಡುವುದಿದೆ. ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗುತ್ತಿರುವುದೇಕೆ? ಅನ್ನೋ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ.
ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಬೆಂಗಳೂರಿನಿಂದ ಹೊರಟು, 11.10ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಲಕ್ಷ್ಮೀ ಹೆಬ್ಬಾಳಕರ್, ಮಧ್ಯಾಹ್ನ 12.15ರಿಂದ ಸಂಜೆ 6.30ರ ವರೆಗೆ ಜಿಲ್ಲೆಯ ಗೋಕಾಕ, ಕಾಗವಾಡ ಹಾಗೂ ಚಿಕ್ಕೋಡಿ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ.
Gruha Lakshmi Scheme: ಈಗಾಗಲೇ ನೇರ ಲಾಭ ವರ್ಗಾವಣೆ(DBT) ಮೂಲಕ ಅರ್ಹ ಫಲಾನುಭವಿಗಳಿಗೆ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಒಟ್ಟು 20 ಸಾವಿರ ರೂ.ವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
Gruha Lakshmi Scheme: ಜೂನ್ ತಿಂಗಳಿನ 11ನೇ ಕಂತು ಹಾಗೂ ಜುಲೈ ತಿಂಗಳ 12ನೇ ಕಂತಿನ ಹಣ ಇನ್ನು ಸಹ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ. ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಹೇಳಲಾಗಿದೆ.
ಪೂರ್ವ ಪ್ರಾಥಮಿಕ ಶಿಕ್ಷಣ ಇಂದು ಎಷ್ಟು ಮಹತ್ವ ಪಡೆದುಕೊಂಡಿದೆ. ಸಮಾಜದಲ್ಲಿ ಅದೆಷ್ಟು ಪ್ರತಿಷ್ಠೆಯ ವಿಷಯವಾಗಿದೆ ಎನ್ನುವುದು ಯಾರಿಗೂ ತಿಳಿಯದ ವಿಷಯವಲ್ಲ. ಆರ್ಥಿಕವಾಗಿ ಸಬಲರಾಗಿರುವವರ ಜೊತೆಗೆ ಬಡ ಮತ್ತು ಮಧ್ಯಮ ವರ್ಗದ ಪಾಲಕರು ಪೈಪೋಟಿಗಿಳಿದು, ಸೋತು ಇನ್ನಷ್ಟು ಕುಗ್ಗಿ ಹೋಗುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ನ್ಯಾಯ ನೀಡಲು ತೆಗೆದುಕೊಂಡಿರುವ ಕ್ರಾಂತಿಕಾರಿ ಹೆಜ್ಜೆಯೇ ಈ ಸರ್ಕಾರಿ ಮಾಂಟೆಸ್ಸರಿ.
Gruha Lakshmi Scheme: ಕಳೆದ 4 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲವೆನ್ನುವುದು ಸುಳ್ಳು. ಏಕೆಂದರೆ ಮೇ ತಿಂಗಳ ಹಣವನ್ನು ಈಗಾಗಲೇ ಹಾಕಿದ್ದೇವೆ. ಜೂನ್ ಮತ್ತು ಜುಲೈ ತಿಂಗಳ ಹಣ ತಾಂತ್ರಿಕ ಕಾರಣದಿಂದ ತಡವಾಗಿತ್ತು. ಈಗಾಗಲೇ ನೇರ ನಗದು ಹಣ ವರ್ಗಾವಣೆ ಮೂಲಕ ಹಣ ಹಾಕಲು ಪ್ರಾರಂಭಿಸಿದ್ದೇವೆ. ಗರಿಷ್ಠ 10 ದಿನಗಳ ಒಳಗೆ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಹಣ ಇದೇ ತಿಂಗಳ 20ರೊಳಗೆ ಮಹಿಳೆಯರ ಖಾತೆಗೆ ಜಮಾ ಆಗಬಹುದು ಎಂದು ಹೇಳಲಾಗುತ್ತಿದೆ. ಇನ್ನುಂದೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಯೋಜನೆಯ ಹಣ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
Gruha Lakshmi Scheme: ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ GST, ತೆರಿಗೆ ವ್ಯಾಪ್ತಿಗೆ ಬರುವ ಅರ್ಜಿದಾರರನ್ನು ಪರಿಶೀಲಿಸಿದ ನಂತರ ಇದೀಗ ರಾಜ್ಯದಲ್ಲಿ 1.23 ಕೋಟಿ ಫಲಾನುಭವಿಗಳಿದ್ದಾರೆ. ಶೀಘ್ರವೇ ಜೂನ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.
Udupi Rain News: ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ರಾಜ್ಯಾದ್ಯಂತ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಮಾಸ್ ಲೀಡರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಇಬ್ಬರೂ ಕಾಂಗ್ರೆಸ್ ನ ಎರಡೂ ಕಣ್ಣು ಇದ್ದ ಹಾಗೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.
Lakshmi Hebbalkar: ನೂತನ ಸಂಸದರಾಗಿ ಆಯ್ಕೆಯಾಗಿರುವ ಜಗದೀಶ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.
Lok Sabha Election 2024 : ನನ್ನ ವಿರುದ್ಧ ಹೇಳಿಕೆಯನ್ನು ಬಿಜೆಪಿಯವರು ಸಂಜಯ್ ಪಾಟೀಲ್ ಮೂಲಕ ಮಾತನಾಡಿಸಿದ್ದಾರೆ ಎನಿಸುತ್ತಿದೆ. ಇದು ನನಗೆ ಮಾಡಿದ ಅಪಮಾನ ಅಲ್ಲ, ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.