Kerala Landslide: ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದ ರಾಜನ್(50) ಹಾಗೂ ಇವರ ಪತ್ನಿ ರಜನಿ @ ರತ್ನಮ್ಮ(45) ಎಂಬವರ ಮನೆ ಕೊಚ್ಚಿ ಹೋಗಿದ್ದು ಇವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Wayanad Landslide: ಸೋಮವಾರ ಮತ್ತು ಮಂಗಳವಾರ ಬೆಳಗಿನ ಜಾವದಲ್ಲಿ ಸುರಿದ ಭಾರೀ ಮಳೆಯು ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ದೊಡ್ಡಮಟ್ಟದ ಭೂಕುಸಿತಗಳನ್ನು ಉಂಟುಮಾಡಿದೆ. ಇದರ ಪರಿಣಾಮ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
Ankola hill collapse case: ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ.
ಈ ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ 66 (National Highway 66)ರಲ್ಲಿ ಚತುಷ್ಪಥ ಕಾಮಗಾರಿ ಪಡೆದ ಐ ಆರ್ ಬಿ ಕಂಪನಿ ನೇರ ಕಾರಣ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕಂಪನಿಯವರು ಗುಡ್ಡದ ಮಣ್ಣು ತೆಗೆಯುವಾಗ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿದ್ದರಿಂದ ದೊಡ್ಡ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
Congo Landslide: ಕಾಂಗೋದ ಬುಕಾವು ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಸುದ್ದಿ ಸಂಸ್ಥೆ ಎಎನ್ಐ ವರದಿಯ ಪ್ರಕಾರ, ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ.
Himachal Pradesh Terrifying Video: ಭೂಕುಸಿತದ ಅವಶೇಷಗಳನ್ನು ತೆರವು ಮಾಡುವಾಗಲೇ ಭೀಕರ ದುರಂತ ಸಂಭವಿಸಿದ್ದು, ಜೆಸಿಬಿ ಮೇಲೆ ಬೃಹತ್ ಬಂಡೆ ಉರುಳಿಬಿದ್ದಿದೆ. ಈ ವಿಡಿಯೋ ನೋಡಲು ತುಂಬಾ ಭಯಾನಕವಾಗಿದೆ.
ರಾಜ್ಯದ ಪ್ರಮುಖ ಯಾತ್ರ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡು ಎಂಬಲ್ಲಿ ನಿರ್ಮಾಣ ಮಾಡಿರುವ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಮುಂಭಾಗ ನಿರ್ಮಾಣ ಮಾಡಿದ್ದ ತಡೆಗೋಡೆ ಕುಸಿತಗೊಂಡಿದೆ.
Jammu Kashmir: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೂಕುಸಿತವಾದ ಪರಿಣಾಮ 13 ಮನೆಗಳು ನಾಶವಾಗಿವೆ. ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ತಪ್ಪಲಿನಲ್ಲಿರುವ ಹರಪಳ್ಳಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮ ಬೆಟ್ಟದ ಒಂದು ಭಾಗವೇ ಕೊಚ್ಚಿ ಹೋಗಿದೆ. ಬೆಟ್ಟದ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ.
ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದು ಶಾಸಕ ಬೋಪಯ್ಯ ಒಂದೂವರೆ ಗಂಟೆಗಳ ಕಾಲ ರಸ್ತೆಯಲ್ಲೇ ಸಿಲುಕಿದ್ದ ಘಟನೆ ನಡೆದಿದೆ. ಕೊಡಗಿನ ಭಾಗಮಂಡಲ ಸಮೀಪದ ಕರಿಕೆ ವ್ಯಾಪ್ತಿಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಗುಡ್ಡ ಕುಸಿದಿದೆ. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಹಿಂದಿರುಗುತ್ತಿದ್ದಾಗ ಮರ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ.. ಅರಣ್ಯ ಇಲಾಖೆ ಸಿಬ್ಬಂದಿ 1 ಗಂಟೆ ಬಳಿಕ ಮರ ತೆರವು ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜಲಪ್ರಳಯವೇ ಸೃಷ್ಟಿ ಆಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿನ ಮನೆಗಳು ಸಂಪೂರ್ಣ ಜಲಾವೃತವಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.