ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಯಾವುದೇ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಇದು ಬಿ.ಎಸ್ ಯಡಿಯೂರಪ್ಪ ಅವರ ಅಥವಾ ಬಸವರಾಜ ಬೊಮ್ಮಾಯಿಯವರ ಸರ್ಕಾರ ಅಲ್ಲ. ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ನಾನು ಶೂನ್ಯ ಸಹಿಷ್ಣುತೆ ಹೊಂದಿದ್ದೇನೆ. ಇಲ್ಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ- ಜೆಡಿಎಸ್ನವರು ಅಧಿಕಾರ ಸಿಗಲಿಲ್ಲ ಎಂದು ಕೈ,ಕೈ ಹಿಸುಕಿಕೊಂಡು ನರಳುತ್ತಿದ್ದಾರೆ. ರಸ್ತೆ, ರಸ್ತೆಗಳಲ್ಲಿ ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಭೇಟಿ ವೇಳೆ ಜೆಡಿಎಸ್ ಪಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡಿದ್ದ ಅಮಿತ್ ಶಾ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದರು.
ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯಕ್ಕೆ ಕ್ರಿಮಿನಲ್ ಆರೋಪ ಹೊತ್ತಿರುವ ಸಚಿವ ಈಶ್ವರಪ್ಪನವರನ್ನ ಸಚಿವ ಸಂಪುಟದಿಂದ ವಜಾ ಮಾಡಲು ರಾಜ್ಯಪಾಲರನ್ನ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಮನವಿ ಮಾಡಿದ್ದೇವೆ.ಸೆಕ್ಷನ್ 306ರಡಿಯಲ್ಲಿ ಈಶ್ವರಪ್ಪನವರನ್ನ ಬಂಧಿಸಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.