2023-24 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಪ್ರವರ್ಗ -1, ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ತರಬೇತಿ ಭತ್ಯೆ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿಗಳಾದ ಹುಬ್ಬಳ್ಳಿ, ಕುಂದಗೋಳ, ನವಲಗುಂದ ಮತ್ತು ಕಲಘಟಗಿ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು, ಆಸಕ್ತಿಯನ್ನು ಹೊಂದಿರುವ ವಿವಿಧ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು 03 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.