ಬಸವರಾಜ ಹೊರಟ್ಟಿಯವರು ಶಿಕ್ಷಣ ಸಚಿವರಾಗಿ ತಂದಿರುವ ಬದಲಾವಣೆ, ಶಿಕ್ಷಣ ಕ್ಷೇತ್ರಕ್ಕೆ ಸ್ಥಿರತೆಯನ್ನು ಕೊಟ್ಟಿದೆ. ಶಿಕ್ಷಕರ ಪ್ರತಿನಿಧಿಯಾಗಿದ್ದರೂ ಒಬ್ಬ ಆಡಳಿತಗಾರರಾಗಿ ಕಠಿಣ ನಿರ್ಣಯಗಳನ್ನು ತೆಗೆದುಕೊಂಡಿರುವ ಕಾರಣ, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಶಿಕ್ಷಕರ ವರ್ಗಾವಣೆ, ಶಿಕ್ಷಕರ ಸವಲತ್ತು, ಹೈಸ್ಕೂಲ್ ಹಾಗೂ ಕಾಲೇಜು ನಿರ್ಮಾಣ ಸೇರಿದಂತೆ ಹಲವು ದಾಖಲಾರ್ಹ ಕೆಲಸಗಳನ್ನು ಮಾಡಿದ್ದಾರೆ. ಶಿಕ್ಷಕರ ಕೆಲಸಗಳನ್ನು ಅತ್ಯಂತ ದಕ್ಷತೆಯಿಂದ ನಿರ್ವಹಿಸಿದ್ದಾರೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.