ರಾಜ್ಯಸಭಾ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ದೊರೆಯುವ 3 ಸ್ಥಾನಗಳಲ್ಲಿ ನಮ್ಮ ಸಮಾಜಕ್ಕೆ 1 ಸ್ಥಾನವನ್ನು ಕೊಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಶಿಷ್ಯಕೋಟೆಯನ್ನು ಶಾಮನೂರು ಶಿವಶಂಕರಪ್ಪ ಹಾಗೂ ವೀರಶೈವ ಲಿಂಗಾಯತರನ್ನು ಹತ್ತಿಕ್ಕಲು ಬಿಟ್ಟಿದ್ದಾರೆ. ಕುರ್ಚಿಗೆ ಆಪತ್ತು ಬಂದಾಗ ಸಿದ್ದರಾಮಯ್ಯ ಅವರು ಮಾತನಾಡುವುದಿಲ್ಲ ಮಾತನಾಡುವುದು ಅವರ ವಂದಿ ಮಾಗಧರು..! ಎಂದು ಬಿಜೆಪಿ ಟೀಕಿಸಿದೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಮತ್ತು ರಾಜ್ಯದ ಅಭಿವೃದ್ಧಿ ಮಾಡಲಿ. ಅವರಿಗೆ ಇಲ್ಲಿಯವರೆಗೂ ಮುಖ್ಯಮಂತ್ರಿ ಆಯ್ಕೆ ಮಾಡಲು ಅಗುತ್ತಿಲ್ಲ. ಬೇಗ ಮುಖ್ಯಮಂತ್ರಿ ಆಯ್ಕೆಯನ್ನು ಮಾಡಲಿ ಎಂದರು.
ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಮಂತ್ರಿಗಳ ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿದೆ.
ಲಿಂಗಾಯತರ ವಿಷಯದಲ್ಲಿ ಬಿಜೆಪಿ ಅವರು ಗಾಬಾರಿಗೊಂಡಿದ್ದಾರೆ. ರಾಜ್ಯದ ಬಿಜೆಪಿಯ ಯಾವುದೇ ನಾಯಕನ ಮುಖವನ್ನು ಇಟ್ಟು ಜನರ ಬಳಿಗೆ ಹೋಗಲಿಕ್ಕೆ ಆಗುತ್ತಿಲ್ಲ ಇವರಿಗೆ, ಮೋದಿ ಶಾ ಅವರನ್ನು ಕರ್ನಾಟಕದ ಶಾಶ್ವತ ನಿವಾಸಿಗಳಾಗಿ ಬಿಟ್ಟಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.