“ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.
EC Electoral Bonds Data:ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಕೇಂದ್ರ ಚುನಾವಣಾ ಆಯೋಗ ಇಲೇಕ್ಟೋರಲ್ ಬಾಂಡ್ ದತ್ತಾಂಶ ಹಂಚಿಕೊಂಡಿದೆ. ಈ ದತ್ತಾಂಶದ ಪ್ರಕಾರ ಭಾರತೀಯ ಜನತಾ ಪಕ್ಷಕ್ಕೆ ಒಟ್ಟು 6,986.5 ಕೋಟಿ ರೂ.ಗಳ ಚುನಾವಣಾ ಬಾಂಡ್ ಪಡೆದುಕೊಂಡಿದೆ (which party received how much donation). ಇದರಲ್ಲಿ ಪಕ್ಷಕ್ಕೆ 2019-20 ರಲ್ಲಿ ಅತ್ಯಧಿಕ ಅಂದರೆ 2555 ಕೋಟಿ ರೂ.ಗಳು ಹರಿದುಬಂದಿದೆ. ಇನ್ನೊಂದೆಡೆ ಕಾಂಗ್ರೆಸ್ ಚುನಾವಣಾ ಬಾಂಡ್ ಮೂಲಕ ಒಟ್ಟು 1,334 ಕೋಟಿ ರೂ.ಪಡೆದುಕೊಂಡಿದೆ. (Business News In Kannada)
Lok Sabha Election 2023 : ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವ ಸಾಧಿಸಿರುವ ಕಾಂಗ್ರೆಸ್,ಇದೇ ಹುಮ್ಮಸ್ಸನಲ್ಲಿ ಲೋಕಸಭೆ ಚುನಾವಣೆ ಎದುರಿಸಲು ತಯಾರಿ ನಡೆಸಿದೆ. ಲೋಕಸಭೆ ಚುನಾವಣೆಗೆ ರೆಡಿಯಾಗಿ ಎಂದು ಪಕ್ಷದ ನಾಯಕರು,ಕಾರ್ಯಕರ್ತರಿಗೆ ಸಿಎಂ,ಡಿಸಿಎಂ ಕರೆ ನೀಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ.
2024ರ ಲೋಕಸಭೆ ಚುನಾವಣೆಗೆ ಪ್ರತಿಪಕ್ಷಗಳ ಪ್ರಧಾನಿ ಹುದ್ದೆ 'ಪತ್ನಿ ಇಲ್ಲದೆ' ಇರಬಾರದು ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ನಿ ಇಲ್ಲದೆ ಪ್ರಧಾನಿ ನಿವಾಸದಲ್ಲಿ ಉಳಿದುಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.
2023ರ ಕೊನೆಯಲ್ಲಿ 5 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2024 ರ ಲೋಕಸಭೆ ಚುನಾವಣೆಯ ಜೊತೆಗೆ, ಕನಿಷ್ಠ 3 ರಾಜ್ಯಗಳು ವಿಧಾನಸಭಾ ಚುನಾವಣೆಗಳನ್ನು ಎದುರಿಸಲಿದೆ. ಕರ್ನಾಟಕ ಚುನಾವಣೆಯ ಕಹಿಯನ್ನು ಮರೆತು ಭಾರತೀಯ ಜನತಾ ಪಕ್ಷ ಮುಂಬರುವ ಚುನಾವಣೆಗಳಿಗೆ ತಯಾರಿ ಆರಂಭಿಸಿದೆ. ತನ್ನ ಲೆಕ್ಕಾಚಾರವನ್ನು ಈ ಬಾರಿ ಪಕ್ಷ ಬದಲಿಸಲಿದೆ ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.