ಅಜಂಗಢ ಕ್ಷೇತ್ರದ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಹಾಗಾಗಿ ಈ ಕ್ಷೇತ್ರದಲ್ಲಿ ಎಸ್ಪಿ ಸಾಕಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
, ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ, ಈ ಕುರಿತು ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ನಾಲ್ಕು ಬಾರಿ ಬಿಜೆಪಿ ಸಂಸದರಾಗಿರುವ ಹುಕ್ಮದೇವ್ ನಾರಾಯಣ್ ಯಾದವ್ ಪುತ್ರ ಅಶೋಕ್ ಯಾದವ್ ಮತ್ತು ವಿಕಾಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಅಭ್ಯರ್ಥಿ ಬದ್ರಿ ಕುಮಾರ್ ಪುರ್ಬೆ ವಿರುದ್ಧ ಶಕೀಲ್ ಸ್ಪರ್ಧಿಸುತ್ತಿದ್ದಾರೆ.
ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಲಾಗಿದ್ದ ಸರ್ಜಿಕಲ್ ಸ್ಟ್ರೈಕ್ ಗಳನ್ನು ವೀಡಿಯೋ ಗೇಮ್ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸೇನೆಯನ್ನು ಅವಮಾನಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಗುರುವಾರ ಬೆಳಿಗ್ಗೆ ರಿವೇರಾ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಸಾರ್ವಜನಿಕರನ್ನು ಭೇಟಿಯಾದ ಸಾಧ್ವಿ, ಭೂಪಾಲದ ಕರ್ಫ್ಯೂ ವಾಲಿ ಮಾತಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.