Karnataka Political News: ಸೋಲಿನ ಬಳಿಕ ಬಿಜೆಪಿ ಪಕ್ಷ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಉಳಿಸಲು ಹಾಗೂ ಹೈ ಕಮಾಂಡ್ ಟಾಸ್ಕ್ ನೆರವೇರಿಸಲು ಹಳೆ ಮೈಸೂರು ಭಾಗದಲ್ಲಿ ಬರುವ ಎಲ್ಲಾ ಲೋಕಸಭೆ ಕ್ಷೇತ್ರದಲ್ಲಿ ಸ್ಥಾನ ಉಳಿಸಿ ಮತ್ತೆ 25ಕ್ಕೂ ಹೆಚ್ಚು ಸ್ಥಾನ ಗಳಿಸಲು ವಿವಿಧ ಪ್ರಯೋಗಗಳನ್ನ ಮಾಡುತ್ತಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಲು ಮುಂದಾಗಿರುವ ಕಾಂಗ್ರೆಸ್ ಪೂರ್ವತಯಾರಿ ಬಗ್ಗೆ ಚರ್ಚಿಸಲು ಇಂದು ಕೆಪಿಸಿಸಿ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಿದೆ. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿರುವ ಭಾರತ್ ಜೋಡೋ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪ್ರಚಾರ ಮತ್ತು ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಅಖಿಲ ಭಾರತ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸಿದಿನಿ. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾರ್ಯಾಧ್ಯಕ್ಷ ಸ್ಥಾನ ನನಗೆ ಬೇಡ. ಡಿ.ಕೆ ಶಿವಕುಮಾರ್ ಅಧ್ಯಕ್ಷರಾಗಿದ್ದಾರೆ. ಅವರೇ ಲೋಕಸಭೆಯವರೆಗೆ ಅಧ್ಯಕ್ಷರಾಗಿರುತ್ತಾರೆ, ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ತಿಳಿಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ದಿಟ್ಟ ಹೋರಾಟ ನಡೆಸಲು ವಿರೋಧಪಕ್ಷಗಳು ಒಗ್ಗಟ್ಟಿನ ಮಂತ್ರ ಜಪಿಸುತ್ತಿವೆ. ಪಾಟ್ನಾದಲ್ಲಿ ನಡೆದ ಮೊದಲ ರಾಜಕೀಯ ಸಭೆಯ ಬಳಿಕ ಯುಪಿಎ ಮಿತ್ರಪಕ್ಷಗಳ ದಂಡು ಬೆಂಗಳೂರಿನತ್ತ ಆಗಮಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.