2024 ರ ಲೋಕಸಭಾ ಚುನಾವಣೆ ಮೇಲೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣು ಇಟ್ಟಿದ್ದು, ಲೋಕಸಭಾ ಚುನಾವಣೆ ಗೆಲ್ಲುವ ತವಕದಲ್ಲಿ ಇದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿಧಾನ ಸಭಾ ಚುನಾವಣೆ ಮಾದರಿ ಅನುಸರಿಸಲು ತಯಾರಿ ಆರಂಭಿಸಿದ್ದಾರೆ.
Lok Sabha Election: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 70ಕ್ಕೂ ಹೆಚ್ಚು ಹೊಸ ಮುಖಗಳಿಗೆ ಮಣೆ ಹಾಕಿದ್ದ ಬಿಜೆಪಿ, ಇದೀಗ ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಇದೇ ಮಾದರಿಯನ್ನು ಅನುಸರಿಸುವ ಸಾಧ್ಯತೆ ಇದ್ದು, ಬಿಜೆಪಿಯ ಬಹುತೇಕ ಹಾಲಿ ಸಂಸದರಿಗೆ ಕೋಕ್ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ಗೆ ಈಗಿನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಳಂದಾದಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಸತತ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಾಲಿ ಸಂಸದ ಕೌಶಲೇಂದ್ರ ಕುಮಾರ್, ತಮ್ಮ ಆಪ್ತರು ಚುನಾವಣಾ ಕಣಕ್ಕೆ ಇಳಿಯಲು ಬಯಸಿದರೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಎಂದು ಶನಿವಾರ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ 144 ಲೋಕಸಭಾ ಕ್ಷೇತ್ರಗಳಲ್ಲಿ 40 ರ್ಯಾಲಿಗಳನ್ನು ನಡೆಸಲು ಯೋಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ಕ್ಲಸ್ಟರ್ನಲ್ಲಿ ಒಂದು ರ್ಯಾಲಿ ನಡೆಸುವ ಸಾಧ್ಯತೆಯಿದೆ.
Lok Sabha Elections 2024: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಜಾತ್ಯತೀತ ಜನತಾ ದಳ, ಬಿಜೆಪಿ-ಕಾಂಗ್ರೆಸ್ ಪಕ್ಷ ಹೊರತುಪಡಿಸಿ ತೃತೀಯ ರಂಗ ಕೇಂದ್ರ ಸರ್ಕಾರ ರಚನೆಯ ತಂತ್ರಗಾರಿಕೆಗೆ ಕೈಜೋಡಿಸಿದೆ.