ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ (ಕಾರಿಡಾರ್ -2) ನಡುವಿನ ಉಪನಗರ ರೈಲು ಯೋಜನೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದಕ್ಕೆ ಕಾರಣವಾದ ಗುತ್ತಿಗೆದಾರ ಸಂಸ್ಥೆಯಾದ ಎಲ್ ಆಂಡ್ ಟಿ ಅಧಿಕಾರಿಗಳನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ ತರಾಟೆಗೆ ತೆಗೆದುಕೊಂಡರು.
ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ. ಪೂರಕವಾಗಿ ಪರಿಷ್ಕೃತ ಕೈಗಾರಿಕಾ ನೀತಿ, ವಿಶ್ವ ದರ್ಜೆಯ ಮೂಲಸೌಕರ್ಯ, ಡಿಜಿಟಲ್ ಸೇವಾ ವಿತರಣೆ, ನವೀನ ತಂತ್ರಜ್ಞಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಉತ್ತರ ಕನ್ನಡದ ತದಡಿಯನ್ನು ಪರಿಸರ ಸೂಕ್ಷ್ಮ ವಲಯವನ್ನಾಗಿಯೇ ಉಳಿಸಿಕೊಂಡು, ವಿಶ್ವ ದರ್ಜೆಯ ಪರಿಸರ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ಮಾಸ್ಟರ್ ಪ್ಲ್ಯಾನ್ ಸಿದ್ಧವಾಗಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳ ಪರಿಸರ ಹಾಗೂ ಅರಣ್ಯ ಸೇರಿದಂತೆ ಇನ್ನೂ ಹಲವು ಇಲಾಖೆಗಳಿಂದ ತ್ವರಿತವಾಗಿ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಭಾರೀ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.