ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ʼನಮ್ಮ ಶಾಲೆ ನಮ್ಮ ಜವಾಬ್ದಾರಿʼ ಎಂಬ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಉದ್ಯೋಗಿಗಳು, ಉದ್ಯಮಿಗಳು, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ಪ್ರಗತಿಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ.
ಇಂದು ಬೆಳೆಯುತ್ತಿರುವ ಕುವೆಂಪು ವಿಶ್ವವಿದ್ಯಾಲಯದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಗುವುದು. ಪ್ರಗತಿ ಪರಿಶೀಲನೆ ನಡೆಸಿ ಲೋಪಗಳಿದ್ದರೆ ಸರಿಪಡಿಸಿ, ಉಳಿಸಿ, ಬೆಳೆಸಲಾಗುವುದು. ವಿಶ್ವವಿದ್ಯಾಲಯ ಜಿಲ್ಲೆಗೆ ಕಿರೀಟ ಇದ್ದಂತೆ ಇದ್ದು, ವಿವಿ ಯಲ್ಲಿನ ಪ್ರಸ್ತುತ ವ್ಯವಸ್ಥೆ ಬಗ್ಗೆ ಪರಿಶೀಲಿಸಲಾಗುವುದು. ಲೋಪಗಳಿದ್ದರೆ ಸಂಬಂಧಿಸಿದವರ ವಿರುದ್ದ ವಿಚಾರಣೆ ಮಾಡಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ 10 ಸಾವಿರದಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಶೇ.25 ರಷ್ಟು ಅನುದಾನ ಮೀಸಲಿರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
BY Vijayendra vs Madhu Bangarappa: ಚಿತ್ರರಂಗದ ಬಗ್ಗೆ ವಿಜಯೇಂದ್ರ ಮಾತನಾಡುವ ಅಗತ್ಯವಿಲ್ಲ. ಜೂನ್ 4ಕ್ಕೆ ಬರಲಿರುವ ಅವರ ಹಣೆಬರಹವನ್ನು ಅವರೇ ನೋಡಿಕೊಳ್ಳಲಿ. ನನ್ನ ಹಣೆಬರಹವನ್ನು ನಾನು ನೋಡಿಕೊಳ್ಳುತ್ತೇನೆ. ನಮಗೇನು ತೊಂದರೆಯಿಲ್ಲವೆಂದು ಮಧು ಬಂಗಾರಪ್ಪ ಕಿಡಿಕಾರಿದ್ದಾರೆ.
Shivarajkumar In Pressmeet: ಸ್ಯಾಂಡಲ್ವುಡ್ ಸೆಮಚುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದೆ ಆಗಬೇಕು ಎಂಬ ಆಸೆಯಿದೆ ಎಂದು ಹೇಳಿಕೊಂಡಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಆದೇಶ ವಿಚಾರ. ನಮಗೇ ನೀರಿಲ್ಲ, ನೀರು ಕೊಡಿ ಅಂದ್ರೆ ಹೇಗೆ..? ಕೇಂದ್ರ ಮಧ್ಯಪ್ರವೇಶ ಮಾಡಿ ವಾಸ್ತವಾಂಶ ಅರಿಯಬೇಕು. ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆಂಬ ವಿಶ್ವಾಸವಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ . ಇದಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರ ಬೆಂಬಲ ಇದೆ. ಬಂಗಾರಪ್ಪ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದರು. ಆಗ ನೀರಿರಲಿಲ್ಲ, ಈಗ ಪರಿಸ್ಥಿತಿ ಅದಕ್ಕಿಂದ ಕೆಟ್ಟದಾಗಿದೆ. ಚಿತ್ರದುರ್ಗದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವಹೇಳನಾಕಾರಿ ಹೇಳಿಕೆ ಹಿನ್ನೆಲೆ ಪ್ರಣವಾನಂದ ಸ್ವಾಮೀಜಿ ಜೀ ಕನ್ನಡ ನ್ಯೂಸ್ ಜೊತೆ ಮಾತನಾಡಿದ್ದು, ನಾನು, ನನ್ನ ಹೆಂಡತಿ, ಮಗ ಮಧು ಬಂಗಾರಪ್ಪ ಮನೆಗೆ ಹೋಗಿ ಊಟ ಮಾಡಿಲ್ಲ. ನಾನು ಕಾನೂನು ಹೋರಾಟ ಮಾಡ್ತಿನಿ. ಹಾಗೆ ಕಾಂಗ್ರೆಸ್ ಹಿರಿಯ ಮುಖಂಡರಿಗೆ ದೂರು ಕೊಡ್ತಿನಿ ಎಂದಿದ್ದಾರೆ.
ಮಂಡ್ಯ ನಗರದ ಹೊಸಹಳ್ಳಿ ಪ್ರೌಢ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೇ ವೇಳೆ ಸಚಿವರು ಮತ್ತು ಶಾಸಕರು ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದರು.
Good News for School Students : 1ರಿಂದ 8ನೇ ತರಗತಿಯ ಶಾಲಾ ಮಕ್ಕಳಿಗೆ ಇನ್ಮುಂದೆ ಎರೆಡೆರಡು ಮೊಟ್ಟೆ ಸಿಗೋದು ಗ್ಯಾರಂಟಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ʻಮೊಟ್ಟೆ ಭಾಗ್ಯʼ ಯೋಜನೆ ಆರಂಭಿಸುತ್ತಾರಂತೆ.. ಯಾವಾಗ ಮಕ್ಕಳಿಗೆ ಎರೆಡೆರಡು ಮೊಟ್ಟೆ ಲಭ್ಯ ಆಗೋದು ಅಂತ ಕುತೂಹಲನಾ ಹಾಗಾದ್ರೆ ಈ ಸ್ಟೋರಿ ಓದಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.