ಮಹಾರಾಷ್ಟ್ರದ ಪುಣೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ನಂತರ ಹೇಳಿಕೆಯೊಂದರಲ್ಲಿ,ತಾವು ಸುರಕ್ಷಿತವಾಗಿದ್ದು,ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Nashik : ಮಹಾರಾಷ್ಟ್ರದ ನಾಸಿಕ್‌ನಲ್ಲಿ ವರ್ಷದ ಮೊದಲ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಸಿಕ್-ಮುಂಬೈ ಹೆದ್ದಾರಿಯಲ್ಲಿರುವ ಗೊಂಡೆ ಗ್ರಾಮದ ಜಿಂದಾಲ್ ಕಂಪನಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಜೀವ ದಹನವಾಗಿದ್ದಾರೆ.
ಗಡಿ ವಿಷಯದಲ್ಲಿ ಬಿಜೆಪಿ ಎರಡು ರೀತಿ ಮಾತನಾಡುತ್ತಿದೆ. ಮುಂಬಯಿಗೆ ಹೋದರೆ ಒಂದು ರೀತಿ, ಬೆಂಗಳೂರಿಗೆ ಬಂದರೆ ಇನ್ನೊಂದು ರೀತಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
Tunisha Suicide Case: ಕಿರುತೆರೆ ನಟಿ ತುನೀಶಾ ಶರ್ಮಾ ಸಾವು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಧಾರಾವಾಹಿಯೊಂದರ ಸೆಟ್‌ನಲ್ಲಿ ತುನೀಶಾ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ತುನೀಶಾ ಸಹನಟ ಶೀಜನ್ ಖಾನ್‍ನನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾನೆ.
Pune auto strike: ಬೈಕ್ ಟ್ಯಾಕ್ಸಿಗಳ ವಿರುದ್ಧ ಸಮರ ಸಾರಿದ್ದ ಆಟೋ ಚಾಲಕರು ನ. 28ರಂದು ಮುಷ್ಕರ ಪ್ರಾರಂಭಿಸಿದ್ದರು. ಬೈಕ್ ಟ್ಯಾಕ್ಸಿಗಳ ವಿರುದ್ಧ ಡಿ.10ರೊಳಗೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈ ಹಿನ್ನೆಲೆ ಕೆಲವು ದಿನಗಳ ನಂತರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿತ್ತು.
ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಪಕ್ಷದ ಅಧ್ಯಕ್ಷ ಶರದ್ ಪವಾರ್ ಉದ್ದಟತನದ ಹೇಳಿಕೆಯನ್ನು ನಿಲ್ಲಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹ ಮಾಡುವ ಜೊತೆಗೆ, ಶರದ್ ಪವಾರ್ ಹಾಗೂ ಮಾಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಸರ್ಕಾರ ಬಂಧಿಸಿ ಜೈಲಿಗಟ್ಟಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
CM Basavarj Bommai ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು.
ವಿಲಕ್ಷಣ ಘಟನೆಯೊಂದರಲ್ಲಿ, ಮುಂಬೈನ ಒಂದೇ ರೀತಿಯ ಅವಳಿ ಸಹೋದರಿಯರ ಜೋಡಿ ಮಹಾರಾಷ್ಟ್ರದ ಸೋಲಾಪುರದ ವ್ಯಕ್ತಿಯನ್ನು ಶುಕ್ರವಾರ ವಿವಾಹವಾದರು. ವಿವಾಹದ ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ತ್ವರಿತವಾಗಿ ವೈರಲ್ ಆಗಿದ್ದು, ಈ ವಿಚಾರವಾಗಿ ಈಗ ಪೊಲೀಸ್ ದೂರು ದಾಖಲಿಸಲಾಗಿದೆ.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
Karnataka Maharashtra Border dispute : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. ಸರ್ವಪಕ್ಷ ಸಭೆಯನ್ನು ವಿರೋಧ ಪಕ್ಷದ ನಾಯಕ ರೊಂದಿಗೆ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಿದ ಕೂಡಲೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Maharashtra-Karnataka Border Dispute: ಗಡಿ ವಿವಾದ ಹಿನ್ನೆಲೆ ಯಾವಾಗ ಬಸ್ ಬರುತ್ತೋ, ಯಾವಾಗ ಊರಿಗೆ ತೆರಳುತ್ತೇವೆಯೋ ಅಂತಾ ಮಹಾರಾಷ್ಟ್ರದ ಜನರು ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಕಾಯುವಂತಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಒಂದು ದಿನದ ನಂತರ, ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರನ್ನು ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ ಎಂದು ನವಿ ಮುಂಬೈ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಬೈ ಪೊಲೀಸರು ನವೆಂಬರ್ 1 ರಿಂದ 15 ರವರೆಗೆ ನಾದರೆ 15 ದಿನಗಳವರೆಗೆ ನಗರದಾದ್ಯಂತ ಸೆಕ್ಷನ್ 144 (ನಿರ್ದಿಷ್ಟ ನ್ಯಾಯವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಿಷೇಧಿಸಿ ಆದೇಶ) ವಿಧಿಸಿದ್ದಾರೆ.