ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಅಧ್ಯಕ್ಷರಾಗಿರುವ ಪಕ್ಷ ಮತ್ತು ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಜಯಂತ್ ಪಾಟೀಲ್ ಅವರ ಭಾವಚಿತ್ರವನ್ನು ಮಾತ್ರ ಬಳಸಬೇಕು ಎಂದು ಮಂಗಳವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ ಸರ್ಕಾರಕ್ಕೆ ಸೇರ್ಪಡೆಯಾದ ಕೆಲವೇ ದಿನಗಳ ನಂತರ, ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮಂಗಳವಾರ ಮುಂಬೈನ ಮಂತ್ರಾಲಯ ಬಳಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಪಕ್ಷದ ಹೊಸ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಇಡೀ ಎನ್ಸಿಪಿ ತನ್ನ ಪರ ಇದೆ ಎಂದು ಅಜಿತ್ ಪವಾರ್ ಹೇಳಿಕೊಂಡಿರುವ ಬೆನ್ನಲ್ಲೇ ಈಗ ಅವರು ನಡೆ ಬಂದಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಶಿವಸೇನೆ-ಬಿಜೆಪಿ ಸರಕಾರದ ಭಾಗವಾಗಿದೆಯೇ ಅಥವಾ ಇನ್ನೂ ವಿರೋಧ ಪಕ್ಷದಲ್ಲಿದೆಯೇ ಎಂಬುದನ್ನು ತಾನು ಇನ್ನೂ ಖಚಿತಪಡಿಸಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದೇ ಪಾತ್ರವನ್ನು ನಿಯೋಜಿಸಬೇಕು ಎಂದು ಎನ್ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಬುಧವಾರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.
Maharashtra Politics: ಗೊಗವಾಲೆ (ಶಿಂಧೆ ಬಣ) ಅವರನ್ನು ಶಿವಸೇನಾ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಸ್ಪೀಕರ್ ಅವರ ನಿರ್ಧಾರ ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜಕೀಯ ಪಕ್ಷ ನೇಮಿಸುವ ವಿಪ್ಗೆ ಮಾತ್ರ ಸ್ಪೀಕರ್ ಮಾನ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ: ಮುಂದಿನ 15-20 ದಿನಗಳಲ್ಲಿ ಮಹಾರಾಷ್ಟ್ರದ ಶಿಂಧೆ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆಯ ಉದ್ಧವ್ ಬಣದ ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ. ಯಾವ ಆಧಾರದಲ್ಲಿ ಅವರು ಈ ದೊಡ್ಡ ಹೇಳಿಕೆ ನೀಡಿದ್ದಾರೆ ಎಂದು ತಿಳಿಯಿರಿ.
ತಮ್ಮ ಬೆಂಬಲಿಗರೊಬ್ಬರಾದ ಶಾಸಕ ಅಬ್ದುಲ್ ಸತ್ತಾರ್ ಅವರ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಿಂಧೆ, ಈ ಎಲ್ಲಾ 50 ಶಾಸಕರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ನನಗೆ ಖಾತ್ರಿಯಿದೆ. ಅವರಲ್ಲಿ ಯಾರಾದರೂ ಸೋತರೆ ನಾನು ರಾಜಕೀಯ ತ್ಯಜಿಸುತ್ತೇನೆ. ಮುಂದಿನ ರಾಜ್ಯ ಚುನಾವಣೆಯಲ್ಲಿ ತಮ್ಮ ಶಿವಸೇನೆ ಮತ್ತು ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷವು ಜಂಟಿಯಾಗಿ 200 ಸ್ಥಾನಗಳನ್ನು ಗೆಲ್ಲಲಿದೆ ಎಂದರು.
ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನಿನ್ನೆ ದಿನ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಇಂದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Maharashtra New CM Eknath Shinde: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಐತಿಹಾಸಿಕ ಅಂತ್ಯ ಕಂಡಿದೆ. ಶಿವಸೇನಾ ಮುಖಂಡ ಏಕನಾಥ್ ಸಿಂಧೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 7.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಖುದ್ದು ಮಹಾರಾಷ್ಟ್ರದ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಘೋಷಣೆ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕರು ಸಂಭ್ರಮಾಚರಣೆ ನಡೆಸಿದ್ದಾರೆ.. ಉದ್ಧವ್ ರಾಜೀನಾಮೆ ಬೆನ್ನಲ್ಲೇ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಮಾಜಿ ಸಿಎಂ ಫಡ್ನವೀಸ್ಗೆ ಸಿಹಿ ತಿನ್ನಿಸಿ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
15 ದಿನಗಳ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನವಾಗಿದೆ.. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಉದ್ಧವ್ ಫೇಸ್ಬುಕ್ ಲೈವ್ನಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಇಂದು ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ವಿಶ್ವಾಸಮತ ಯಾಚನೆಗೂ ಮೊದಲೇ ರಾಜೀನಾಮೆ ಘೋಷಣೆ ಮಾಡಲಾಗಿದೆ.
ಜೂನ್ 30 ರಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಉದ್ಧವ್ ಠಾಕ್ರೆ ರಾಜಿನಾಮೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಮಾಡ್ತೀವಿ ಎಂದು ಈ ಹಿಂದೆಯೇ ಮುರುಗೇಶ್ ನಿರಾಣಿ ಹೇಳಿದ್ದಾರೆ.. ಇವೆಲ್ಲ ಬಿಜೆಪಿಯ ನಾಟಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಬಂಡಾಯ ಶಾಸಕರು ಚೆಸ್ ಮತ್ತು ಲುಡೋ ಸೇರಿದಂತೆ ವಿವಿಧ ಒಳಾಂಗಣ ಆಟಗಳನ್ನು ಆಡುವ ಮೂಲಕ ತಮ್ಮ ಸಮಯವನ್ನು ಕಳೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ಸಭೆಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಗಂಭೀರ ಚಟುವಟಿಕೆಯನ್ನು ಹೊಂದಿಲ್ಲ ಎಂದು ಶಾಸಕರ ಆಪ್ತ ಮೂಲವು ಅನಾಮಧೇಯತೆಯ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ವಿಕೃತಿ ಮನಸ್ಸಿನವರು ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.. ಎಂಇಎಸ್ ಪ್ರತಿಭಟನೆ ವಿಚಾರ ಬೆಳಗಾವಿಯಲ್ಲಿ ಮಾತನಾಡಿದ ಕಾರಜೋಳ, ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಮರಾಠಿಯಲ್ಲಿ ದಾಖಲೆ ನೀಡಲು ಆಗ್ರಹಿಸಿ ಎಂಇಎಸ್ ಪ್ರತಿಭಟನೆ ನಡೆಸೋದ್ರಲ್ಲಿ ಅರ್ಥವಿಲ್ಲ. ಅವರೇನು ಪಾಕಿಸ್ತಾನದವರಲ್ಲ ಅಂತಾ ತಿರುಗೇಟು ಕೊಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿರುವುದು ಮೂರಾಬಟ್ಟೆ ಸರ್ಕಾರ ಎಂದು ಬೆಳಗಾವಿಯಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.. ಕಾಂಗ್ರೆಸ್ ಮತ್ತು ಶಿವಸೇನೆ ಎಂದೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ. ನೀರಿಗೆ ಎಣ್ಣೆ ಸೇರಿಸಿದ ಹಾಗೆ ಆಗಿದೆ. ನೀರು ಎಣ್ಣೆ ಪ್ರತ್ಯೇಕ ಇರುತ್ತವೆ. ಶಿವಸೇನೆ ಹುಟ್ಟಿದ್ದು ಹಿಂದುತ್ವದ ಆಧಾರದ ಮೇಲೆ. ಅಧಿಕಾರದ ಆಸೆಗಾಗಿ ಉದ್ಧವ್ ಠಾಕ್ರೆ ತತ್ವ ಸಿದ್ಧಾಂತ ಇಲ್ಲದ ಪಕ್ಷದ ಜತೆಗೆ ಕೈಜೋಡಿಸಿ ಸರ್ಕಾರ ಮಾಡಿದ್ದೇ ಮಹಾ ಅಪರಾಧ ಎಂದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.