ಕರೋನವೈರಸ್ ಪ್ರಕರಣಗಳಲ್ಲಿನ ಮಾರಣಾಂತಿಕ ಹೆಚ್ಚಳವನ್ನು ಎದುರಿಸಲು ಮಹಾರಾಷ್ಟ್ರ ಸರ್ಕಾರವು "ಬ್ರೇಕ್ ದಿ ಚೈನ್" ಎಂಬ ಶೀರ್ಷಿಕೆಯಡಿ ಸರಣಿ ನಿರ್ಬಂಧಗಳನ್ನು ಬುಧವಾರ ತಡರಾತ್ರಿ ಘೋಷಿಸಿತು.ಈ ನಿಯಮಗಳು ಗುರುವಾರ ರಾತ್ರಿ 8 ರಿಂದ ಜಾರಿಗೆ ಬರಲಿದ್ದು, ಮೇ 1 ರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಕರೋನವೈರಸ್ ನಿಂದಾಗಿ ಮಹಾರಾಷ್ಟ್ರವು ಇಂದು 568 ಸಾವುಗಳನ್ನು ವರದಿ ಮಾಡಿದೆ, ಇದು ಸಾವಿನ ಸಂಖ್ಯೆಯಲ್ಲಿ ಇದುವರೆಗಿನ ಗರಿಷ್ಠ ಏಕದಿನ ಏರಿಕೆಯನ್ನು ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ 67,468 ಹೊಸ ಪ್ರಕರಣಗಳನ್ನು ದಾಖಲಿಸಿದೆ.
ಆಮ್ಲಜನಕದ ಕೊರತೆಯಿಂದಾಗಿ ಇಪ್ಪತ್ತೆರಡು ಕೊರೊನಾ ರೋಗಿಗಳು ಇಂದು ಸಾವನ್ನಪ್ಪಿದ್ದಾರೆ ಎಂದು ನಾಸಿಕ್ ನ ಜಿಲ್ಲಾಧಿಕಾರಿ ಹೇಳಿದ್ದಾರೆ.ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕರ್ ಸೋರಿಕೆಯಾದ ನಂತರ ಸುಮಾರು 30 ನಿಮಿಷಗಳ ಕಾಲ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿದೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್ಡೌನ್ ಹೊರತಾಗಿಯೂ, ಒಂದೇ ದಿನದಲ್ಲಿ 68 ಸಾವಿರಕ್ಕೂ ಹೆಚ್ಚು ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಂದೇ ದಿನದಲ್ಲಿ 503 ಕರೋನಾ ರೋಗಿಗಳು ಸಾವನ್ನಪ್ಪಿರುವುದು ಎಲ್ಲರ ಆತಂಕವನ್ನು ಹೆಚ್ಚಿಸಿದೆ.
Maharashtra Coronavirus Update - ಮಹಾರಾಷ್ಟ್ರ (Maharashtra)ದಲ್ಲಿ ಇಂದು ಕೊರೊನಾ ವೈರಸ್ ನ ದಾಖಲೆಯ 63, 729 ಹೊಸ ಪ್ರಕರಣಗಳು ವರದಿಯಾಗಿವೆ. ಇನ್ನೊಂದೆಡೆ ಕಳೆದ 24 ಗಂಟೆಗಳಲ್ಲಿ ಸುಮಾರು 400 ಜನರು ಈ ಮಾರಕ ವೈರಸ್ ದಾಳಿಗೆ ತುತ್ತಾಗಿದ್ದಾರೆ.
ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮಹಾರಾಷ್ಟ್ರ ಮತ್ತು ದೆಹಲಿ ಕರೋನವೈರಸ್ ಪ್ರಕರಣಗಳಲ್ಲಿ ಇದುವರೆಗಿನ ಅತಿದೊಡ್ಡ ಏಕದಿನ ಏರಿಕೆ ವರದಿ ಮಾಡಿದೆ. ಸತತ ಎರಡನೇ ದಿನವೂ ದೇಶವು 2 ಲಕ್ಷ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ.
ಮಹಾರಾಷ್ಟ್ರದಲ್ಲಿ ಗುರುವಾರ 61,695 ಹೊಸ ಕೊರೊನಾ ಪ್ರಕರಣಗಳು ಮತ್ತು 349 ಸಾವುಗಳು ದಾಖಲಾಗಿವೆ.ಪರಿಸ್ಥಿತಿ ಹದಗೆಟ್ಟಿರುವ ಹಿನ್ನಲೆಯಲ್ಲಿ ಈಗ ಮೇ 1 ರವರೆಗೆ ಕಠಿಣ ಕರ್ಫ್ಯೂ ಜಾರಿಗೊಳಿಲಾಗಿದೆ.
ಕರೋನವೈರಸ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬರುತ್ತಿರುವ ಹಿನ್ನಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ಇನ್ನೂ ಇಬ್ಬರು ರಾಜ್ಯ ಸಚಿವರು 15 ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಆಗ ರಾಜ್ಯವು ರಾಷ್ಟ್ರಪತಿಗಳ ಆಡಳಿತಕ್ಕೆ ಸೂಕ್ತವಾಗಲಿದೆ ಎಂದು ಹೇಳಿದ್ದಾರೆ.
ಕಳೆದ ಏಳು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ದೈನಂದಿನ ಹೊಸ ಪ್ರಕರಣಗಳ ಬೆಳವಣಿಗೆಯ ದರವು 3.6 ಶೇಕಡಾ ಮತ್ತು ಪಂಜಾಬ್ನಲ್ಲಿ ಇದು 3.2 ಶೇಕಡಾ ಇತ್ತು. ಮಹಾರಾಷ್ಟ್ರದಲ್ಲಿ ಮಾರ್ಚ್ 31 ರ ಮೊದಲು ಎರಡು ವಾರಗಳಲ್ಲಿ 4,26,108 ಪ್ರಕರಣಗಳು ವರದಿಯಾಗಿವೆ.
ಪ್ರತಿದಿನ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈಗ ಕೇಂದ್ರದ ಸಾರ್ವಜನಿಕ ಆರೋಗ್ಯ ತಜ್ಞರು ಮತ್ತು ವೈದ್ಯರನ್ನು ಒಳಗೊಂಡಿರುವ ತಂಡವು ಮಹಾರಾಷ್ಟ್ರ, ಪಂಜಾಬ್ ಮತ್ತು ಛತ್ತೀಸ್ಗ ಡಕ್ಕೆ ಕಳುಹಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.