ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದೆ.. ಮಹಾಮೇಳಾವ್ದಲ್ಲಿ ಪಾಲ್ಗೊಳ್ಳುವಂತೆ ಮಹಾರಾಷ್ಟ್ರ ನಾಯಕರಿಗೆ MES ಆಹ್ವಾನ ನೀಡಿದೆ. ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರೋ ಅಧಿವೇಶನ ನಡೆಯಲಿದೆ. ಅದೇ ದಿನ ಮಹಾಮೇಳಾವ್ಗೆ MES ಸಿದ್ಧತೆ ನಡೆಸಿದೆ.
ಕರ್ನಾಟಕ ಮಹಾರಾಷ್ಟ್ರ ನಡುವಿನ ಗಡಿ ಸಮರ ಸಂಸತ್ತಿನಲ್ಲೂ ಮಾರ್ದನಿಸಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವೇ ಲೋಕಸಭೆಯಲ್ಲಿ ಬೆಳಗಾವಿ ಗಡಿ ಘರ್ಷಣೆಯ ವಿಚಾರವನ್ನು ಮರಾಠಿ ಸಂಸದರು ಪ್ರಸ್ತಾಪಿಸಿದ್ದು, ಕರ್ನಾಟಕದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಶೀವಸೇನೆ ಉದ್ಧಟತನದ ವಿರುದ್ಧ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.. ಬೆಳಗಾವಿಯ ಹಿರೇಬಾಗೇವಾಡಿ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಲಾರಿಗಳ ಗಾಜು ಒಡೆದು ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರದ ಎನ್ಸಿಪಿ ಪಕ್ಷದ ಅಧ್ಯಕ್ಷ ಶರದ್ ಪವಾರ್ ಉದ್ದಟತನದ ಹೇಳಿಕೆಯನ್ನು ನಿಲ್ಲಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹ ಮಾಡುವ ಜೊತೆಗೆ, ಶರದ್ ಪವಾರ್ ಹಾಗೂ ಮಾಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಸರ್ಕಾರ ಬಂಧಿಸಿ ಜೈಲಿಗಟ್ಟಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
CM Basavarj Bommai ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡುವ ಬಗ್ಗೆ ತಿಳಿದ ಸಂದರ್ಭದಲ್ಲಿ ಲಿಖಿತವಾಗಿ ಈಗಿರುವ ವಾತಾವರಣದಲ್ಲಿ ಭೇಟಿ ನೀಡುವುದು ಬೇಡ. ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಲಿದೆ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಆದಾಗ್ಯೂ ಕೂಡ ಅವರು ಬರುವುದಾಗಿ ತಿಳಿಸಿರುವುದು ಸರಿಯಾದ ಕ್ರಮವಲ್ಲ ಎಂದರು.
ವಿಲಕ್ಷಣ ಘಟನೆಯೊಂದರಲ್ಲಿ, ಮುಂಬೈನ ಒಂದೇ ರೀತಿಯ ಅವಳಿ ಸಹೋದರಿಯರ ಜೋಡಿ ಮಹಾರಾಷ್ಟ್ರದ ಸೋಲಾಪುರದ ವ್ಯಕ್ತಿಯನ್ನು ಶುಕ್ರವಾರ ವಿವಾಹವಾದರು. ವಿವಾಹದ ವೀಡಿಯೊಗಳನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಲಾಗಿದೆ ಮತ್ತು ತ್ವರಿತವಾಗಿ ವೈರಲ್ ಆಗಿದ್ದು, ಈ ವಿಚಾರವಾಗಿ ಈಗ ಪೊಲೀಸ್ ದೂರು ದಾಖಲಿಸಲಾಗಿದೆ.
ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಇನ್ನೆನು ಕೆಲವೇ ಗಂಟೆಗಳಲ್ಲಿ ಸುಪ್ರೀಂಕೋರ್ಟ್ನಲ್ಲಿ ಗಡಿ ವಿಚಾರಣೆ ನಡೆಯಲಿದ್ದು, ಮಹಾರಾಷ್ಟ್ರ ಮತ್ತು ಕರ್ನಾಟಕ ಜನರ ಚಿತ್ತ ನ್ಯಾಯಾಲಯದ ಕಡೆ ಮೂಡಿದೆ. ಮತ್ತೊಂದು ಕಡೆ ಮಹಾರಾಷ್ಟ್ರ ಕನ್ನಡಿಗರು ಕರ್ನಾಟಕ ರಾಜ್ಯಕ್ಕೆ ನಮ್ಮನ್ನು ಸೇರಿಸಿ ಎನ್ನುವ ಕೂಗು ದಿನದಿಂದ ದಿನಕ್ಕೆ ವ್ಯಾಪಕವಾಗಿ ಕೇಳಿಬರುತ್ತಿದೆ.
ವಿಜಯ್ ಹಜಾರೆ ಟ್ರೋಫಿಯ 2ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಓವರ್ನಲ್ಲಿ 7 ಸಿಕ್ಸರ್ ಸಿಡಿಸುವ ಮೂಲಕ ವಿಶ್ವದಾಖಲೆ ಬರೆದಿರುವ ರುತುರಾಜ್ ಉತ್ತರಪ್ರದೇಶ ವಿರುದ್ಧ ದ್ವಿಶತಕ ಬಾರಿಸಿದ್ದಾರೆ.
Karnataka Maharashtra Border dispute : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ. ಸರ್ವಪಕ್ಷ ಸಭೆಯನ್ನು ವಿರೋಧ ಪಕ್ಷದ ನಾಯಕ ರೊಂದಿಗೆ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಿದ ಕೂಡಲೇ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.