Girl Beats Bus Conductor: ಸಾರ್ವಜನಿಕ ಸ್ಥಳಗಳಲ್ಲಿ ಈವ್-ಟೀಸಿಂಗ್ ಘಟನೆಗಳು ಸಾಮಾನ್ಯವಾಗಿ ಗಂಭೀರ ಕಳವಳವನ್ನು ಉಂಟುಮಾಡುತ್ತವೆ. ಕೆಲವು ದಿನಗಳ ಹಿಂದೆ ಇವೆಲ್ಲ ಕಾಮನ್ ಎಂದು ಮೌನವಾಗಿರುತ್ತಿದ್ದರು. ಆದರೆ, ಇತ್ತೀಚೆಗೆ ಪೊಲೀಸರು ನೀಡಿದ ಜಾಗೃತಿಯಿಂದಾಗಿ ಅನೇಕ ಸಂತ್ರಸ್ತರು ಈಗ ಬಲಶಾಲಿಯಾಗುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಮೂರು ದಿನಗಳ ನಂತರ ಮತ್ತೊಮ್ಮೆ ಈರುಳ್ಳಿ ಹರಾಜು ಆರಂಭವಾಗಲಿದೆ. ಈರುಳ್ಳಿ ರಫ್ತಿನ ಮೇಲೆ ಶೇಕಡಾ 40ರಷ್ಟು ಸುಂಕ ವಿಧಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಡಾ. ಭಾರತಿ ಪವಾರ್ ಭರವಸೆ ನೀಡಿದ್ದಾರೆ. ಇದ್ರಿಂದ ಶ್ರೀಸಾಮಾನ್ಯರಿಗೆ ಸಂತಸದ ಸುದ್ದಿ ಸಿಗಲಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ
"ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಭರವಸೆ ನೀಡಲಿ" ಎಂದು ಡಿಕೆಶಿ ಸವಾಲೆಸೆದಿದ್ದಾರೆ.
ಮಹಾರಾಷ್ಟ್ರ ಸಚಿವರು ಮಾನಸಿಕ ಸಮತೋಲನ ಕಳ್ಕೊಂಡಿದ್ದಾರೆ. ಚೀನಾವನ್ನು ಬಗ್ಗು ಬಡಿದಂತೆ ನಿಮ್ಮನ್ನು ಹಿಮ್ಮೆಟ್ಟಿಸುವ ಶಕ್ತಿ ಕನ್ನಡಿಗರಿಗಿದೆ ಎಂದು ಮಹಾರಾಷ್ಟ್ರ ಸಚಿವರ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ಅಸ್ಥಿರತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಕರ್ನಾಟಕದಲ್ಲಿ ಆಗಿದ್ದು ಮಹಾರಾಷ್ಟ್ರದಲ್ಲಿ ಆಗುತ್ತಿದೆ. ಸಿಎಂ ಉದ್ಧವ್ ಠಾಕ್ರೆ ನಡವಳಿಕೆಯೆ ಇದಕ್ಕೆ ಕಾರಣ. ಸಿಎಂ ಆದ ಮೇಲೆ ಸರ್ವಾಧಿಕಾರಿಗಳಾದರೆ ಹೀಗೆ ಆಗುತ್ತದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ದರ್ಪ, ದೌರ್ಜನ್ಯದಿಂದ ಇಲ್ಲಿನ ಶಾಸಕರು ದಂಗೆ ಎದ್ದರು. ಇದೇ ಕೆಲಸ ಮಹಾರಾಷ್ಟ್ರದಲ್ಲೂ ಆಗುತ್ತಿದೆ. ಶಾಸಕರ ಸ್ವಾಭಿಮಾನ ಕೆಣಕಿದ್ದಾಗ ಈ ರೀತಿಯ ಕ್ಷೀಪ್ರ ರಾಜಕೀಯ ಕ್ರಾಂತಿ ಆಗುತ್ತೆ ಎಂದು ವಿಶ್ವನಾಥ್ ಹೇಳಿದರು.
ರಾಜ್ಯದಲ್ಲಿ ಜಿಕಾ ವೈರಸ್ ನ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆಯೇ, ಸರ್ಕಾರಿ ವೈದ್ಯಕೀಯ ತಂಡವು ಶನಿವಾರ ಬೆಲ್ಸರ್ ಗ್ರಾಮಕ್ಕೆ ಭೇಟಿ ನೀಡಿತು. ಗ್ರಾಮ ಪಂಚಾಯತ್ ಸದಸ್ಯರನ್ನು ಭೇಟಿಯಾಗಿರುವ ತಂಡ ವೈರಸ್ (Virus) ಹರಡದಂತೆ ತಡೆಗಟ್ಟುವ ಕ್ರಮಗಳ ಬಗ್ಗೆ ಸೂಚನೆ ನೀಡಿದೆ
ರೆಗ್ಯುಲೇಟರಿ ಕಾಂಪ್ಲಿಯನ್ಸ್ ನ ಕೊರತೆಯಿಂದಾಗಿ ಬ್ಯಾಂಕ್ ಮೇಲೆ ದಂಡ ವಿಧಿಸಲಾಗಿದೆ ಎಂದು ಆರ್ ಬಿಐ ಹೇಳಿದೆ. ಮಾರ್ಚ್ 31, 2019 ರಂತೆ ಸಹಕಾರಿ ಬ್ಯಾಂಕಿನ ಆರ್ಥಿಕ ಸ್ಥಿತಿಯನ್ನು ಆಧರಿಸಿದ ನಿರೀಕ್ಷಣಾ ವರದಿಯಲ್ಲಿ ರಿಸರ್ವ್ ಬ್ಯಾಂಕ್ ಹೊರಡಿಸಿದ ಕೆಲವು ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿರುವ ಅಂಶ ಬೆಳಕಿಗೆ ಬಂದಿದೆ.
ಕರೋನಾ ವೈರಸ್ ಸೋಂಕು ಶ್ವಾಸಕೋಶದ ಮೇಲೆ ಎಷ್ಟರ ಮಟ್ಟಿಗೆ ಹೇಗೆ ಪರಿಣಾಮ ಬೀರಿದೆ ಎನ್ನುವುದನ್ನು ಕಂಡು ಹಿಡಿಯಲು ಈ ವಾಕ್ ಟೆಸ್ಟ್ ನೆರವಾಗುತ್ತದೆ. ಮಹಾರಾಷ್ಟ್ರದ ಕೊಲ್ಹಾಪುರ ಮತ್ತು ಪುಣೆಯಲ್ಲಿ, ಹೋಂ ಐಸೋಲೇಶನ್ ನಲ್ಲಿರುವ ರೋಗಿಗಳಿಗೆ ದಿನಕ್ಕೆ ಎರಡು ಬಾರಿ ಈ 6 ಮಿನಿಟ್ ವಾಕ್ ಟೆಸ್ಟ್ ಮಾಡುವಂತೆ ಸೂಚಿಸಲಾಗಿದೆ.
ಮುಂಬಯಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ರಾಜೇಶ್ ಟೋಪೆ ಮಹಾರಾಷ್ಟ್ರದಲ್ಲಿ ಕರೋನಾ ಮೂರನೇ ಅಲೆ ಅಪ್ಪಳಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಈ ಕುರಿತು ತಜ್ಞರ ಹೇಳಿಕೆಯ ಆಧಾರ ನೀಡಿದ ಸಚಿವ ಟೊಪೆ ಜುಲೈ ಅಥವಾ ಆಗಸ್ಟ್ ನಲ್ಲಿ ಮೂರನೇ ಅಲೆ ಅಪ್ಪಳಿಸಲಿದೆ ಎಂದು ಹೇಳಿದ್ದಾರೆ.
ಮಂಗಳವಾರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯನ್ನು ಭೇಟಿಯಾದ ಆರೋಗ್ಯ ಸಚಿವ ರಾಜೇಶ್ ಟೋಪೆ, ರಾಜ್ಯಾದ್ಯಂತ ಬುಧವಾರ ರಾತ್ರಿ 8 ಗಂಟೆಯಿಂದ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಮೊದಲು ಮಹಾರಾಷ್ಟ್ರ ಬೋರ್ಡ್ ನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ಪ್ರಮೋಟ್ ಮಾಡುವುದಾಗಿ ಸರ್ಕಾರ ಘೋಷಿಸಿತ್ತು. ಇದೀಗ 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಕೂಡಾ ಪರೀಕ್ಷೆಗೆ ಒಳಪಡಿಸದೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.
ನಿನ್ನೆ ಒಂದೇ ದಿನಕ್ಕೆ ಮಹಾರಾಷ್ಟ್ರದಲ್ಲಿ 49,447 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಪುಣೆಯಲ್ಲಿಯು ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 10,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.
ಮುಂಬಯಿಯಲ್ಲಿ ಮತ್ತೆ ಹೆಚ್ಚುತ್ತಿದೆ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ವಾರ್ಧಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ 8 ರಿಂದ ಸೋಮವಾರ ಬೆಳಿಗ್ಗೆ 8 ರವರೆಗೆ ಕರ್ಫ್ಯೂ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚುವಂತೆ ಆದೇಶ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.