ಕರ್ನಾಟಕದಿಂದ ಮುಂಬರುವ ರಾಜ್ಯಸಭಾ ಚುನಾವಣೆಗೆ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ಅಭ್ಯರ್ಥಿಯಾಗಿ ಘೋಷಿಸಿದೆ.ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ನಾಯಕರಾಗಿದ್ದ ಖರ್ಗೆ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಗುಲ್ಬರ್ಗಾ ಸಂಸತ್ ಸ್ಥಾನದಿಂದ ಸೋತಿದ್ದರು.
ದೇಶದಲ್ಲಿ ನಡೆದ ಹಲವು ಚುನಾವಣೆಗಳಲ್ಲಿ ಪಕ್ಷಾಂತರಿಗಳಲ್ಲಿ 70% ಜನರು ಸೋತಿದ್ದಾರೆ.ಇದೇ ಫಲಿತಾಂಶ ರಾಜ್ಯದಲ್ಲೂ ಬರಲಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಶಿವಸೇನಾಗೆ ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿಕೂಟ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಈಗ ಕಾಂಗ್ರೆಸ್ ನ ನಾಯಕ ಮಲ್ಲಿಕಾರ್ಜುನ್ ಖರ್ಗೆ ಜನರು ಪ್ರತಿಪಕ್ಷದಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ ಅದನ್ನು ಪಕ್ಷ ಸ್ವೀಕರಿಸಿದೆ ಎಂದು ಹೇಳಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ 'ಶಾಸ್ತ್ರ ಪೂಜೆ' ಸಂಪ್ರದಾಯವನ್ನು 'ತಮಾಶಾ' ಎಂದು ಕರೆದಿದ್ದಕ್ಕಾಗಿ ಮುಂಬೈ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸಂಜಯ್ ನಿರುಪಮ್ ಅವರು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬುಧವಾರದಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿರುವುದು ಸ್ವಾಗತಾರ್ಹ. ಆದರೆ, ಈ ಹಿಂದೆ ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣವಾದ ಆಪರೇಶನ್ ಕಮಲದ ಬಗ್ಗೆಯೂ ತನಿಖೆ ನಡೆಯಲಿ ಎಂದು ಖರ್ಗೆ ಆಗ್ರಹಿಸಿದ್ದಾರೆ.
ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ನೂತನ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈಗ ಅಧ್ಯಕ್ಷ ಹುದ್ದೆ ಖಾಲಿ ಉಳಿದಿದೆ.
ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ನೂತನ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ. ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಈಗ ಅಧ್ಯಕ್ಷ ಹುದ್ದೆ ಖಾಲಿ ಉಳಿದಿದೆ.
ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ರಾಹುಲ್ ಗಾಂಧಿ ನಿರಾಕರಿಸಿದ ಬೆನ್ನಲ್ಲೇ ಈಗ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಅಥವಾ ಮಹಾರಾಷ್ಟ್ರದ ಸುಶೀಲ್ ಕುಮಾರ್ ಶಿಂಧೆ ನಡುವೆ ಯಾರನ್ನಾದರೂ ನೇಮಕ ಮಾಡಬಹುದು ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ.
ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಕಮಿಟಿ ಸಭೆಯಲ್ಲಿ ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಲಾಗಿದೆ. ಆ ಮೂಲಕ ಇದೇ ಮೊದಲ ಬಾರಿಗೆ ಸಿಬಿಐ ಇತಿಹಾಸದಲ್ಲಿ ಮುಖ್ಯಸ್ಥರೊಬ್ಬರನ್ನು ವಜಾಗೊಳಿಸಲಾಗಿದೆ. ವರ್ಮಾ ಅವರ ಅಧಿಕಾರಾವಧಿ ಜನವರಿ 31 ರವರಗೆ ಇತ್ತು ಎನ್ನಲಾಗಿದೆ.
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಹತ್ತಿರವಿರುವುದರಿಂದ ಬಿಜೆಪಿಗೆ ಸಹಾಯಮಾಡಲು ರಾಮಮಂದಿರ ವಿಷಯವನ್ನು ಮತ್ತೆ ಮುಖ್ಯವಾಹಿನಿ ತಂದಿದೆ ಎಂದು ಅವರು ತಿಳಿಸಿದರು.