ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಈಗ 24 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಅವರು 7000 ಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿದ್ದಾರೆ.
ಆ ಮೂಲಕ 137 ವರ್ಷಗಳ ಇತಿಹಾಸವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಪದವಿಗಾಗಿ ನಡೆದ ಆರನೇ ಚುನಾವಣೆಯಲ್ಲಿಈಗ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಸ್.ನಿಜಲಿಂಗಪ್ಪನವರ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ ಎರಡನೇ ಕನ್ನಡಿಗ ಹಾಗೂ ಜಗಜೀವನ್ ರಾಮ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ದಲಿತ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.