ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹಾರಾಷ್ಟ್ರ ಸರ್ಕಾರವನ್ನು ಅನೈತಿಕ ರೀತಿಯಲ್ಲಿ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಶರದ್ ಪವಾರ್ ಅವರು ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದರು. ಇವರು ಏನಾದ್ರು ಅಧ್ಯಕ್ಷರಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಬಿಜೆಪಿ ರಾಷ್ಟ್ರಿಯ ಉಪಾಧ್ಯಕ್ಷ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ.
‘ಉತ್ತರ ಬಂಗಾಳವನ್ನು ವಿಭಜಿಸದಿದ್ದರೆ ನನ್ನನ್ನು ಸಾಯಿಸುತ್ತೇನೆ ಎಂದು ಹೇಳುತ್ತಿದ್ದಾರೆ, ನಿಮಗೆ ದಮ್ಮಿದ್ದರೆ ನನ್ನ ಎದೆಗೆ ಗುಂಡಿಡಿ, ನಾನು ಸಾಕಷ್ಟು ಬಂದೂಕುಗಳನ್ನು ನೋಡಿದ್ದೇನೆ ಎಂದು ತಿರುಗೇಟು ನೀಡಿದರು.
ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ರಾಷ್ಟ್ರೀಯ ಆರ್ಥಿಕತೆಯನ್ನು ನಾಶಪಡಿಸುತ್ತಿದೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಈಗ ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಸಾಮ್ಯದ ವಿಶ್ವವಿದ್ಯಾನಿಲಯಗಳಿಗೆ ಮುಖ್ಯಮಂತ್ರಿಗಳನ್ನು ಕುಲಪತಿಗಳನ್ನಾಗಿ ನೇಮಿಸಲು ಯೋಜಿಸುತ್ತಿದೆ.
ಮಾರ್ಚ್ 21 ರಂದು ರಾಮ್‌ಪುರಹತ್ ಬಳಿಯ ಬೊಗ್ಟುಯಿ ಗ್ರಾಮದಲ್ಲಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್‌ಗಳಿಂದ ಮನೆಗಳ ಗುಂಪಿನ ಮೇಲೆ ದಾಳಿ ಮಾಡಿದ ನಂತರ ಎಂಟು ಜನರನ್ನು ಜೀವಂತವಾಗಿ ಸುಟ್ಟುಹಾಕಲಾಯಿತು, ಆದರೆ ಒಂದು ವಾರದ ನಂತರ ಮತ್ತೊಬ್ಬರು ಗಾಯಗಳಿಗೆ ಬಲಿಯಾದರು. ಈ ದಾಳಿಯನ್ನು ಸ್ಥಳೀಯ ಟಿಎಂಸಿ ನಾಯಕ ಬದು ಶೇಖ್ ಗಂಟೆಗಳ ಹಿಂದೆ ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ನೋಡಲಾಗುತ್ತಿದೆ.
ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು 20 ಸದಸ್ಯರ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು ರಚಿಸಿದ್ದಾರೆ ಎಂದು ಪಕ್ಷದ ನಾಯಕ ಪಾರ್ಥ ಚಟರ್ಜಿ ಶನಿವಾರ ಮಾಹಿತಿ ನೀಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾನುವಾರದಂದು ಕೋಲ್ಕತ್ತಾದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸುವ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಆಘಾತಕಾರಿ ಘಟನೆಗಳಲ್ಲಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ - ಗುರುವಾರ (ಡಿಸೆಂಬರ್ 9) ನಾಡಿಯಾ ಜಿಲ್ಲೆಯ ಆಡಳಿತಾತ್ಮಕ ಪರಿಶೀಲನಾ ಸಭೆಯನ್ನು ನಡೆಸುತ್ತಿದ್ದಾಗ - ಕೃಷ್ಣನಗರ ಕ್ಷೇತ್ರದ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal CM Mamata Banerjee) ಅವರು ಗುರುವಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಬೆಂಗಾಲಿ ಬಲ್ಲವರಿಗೆ ಆದ್ಯತೆ ನೀಡಲಾಗುವುದು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾಬ್ಯಾನರ್ಜಿ ಅವರು ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡುತ್ತಿದ್ದಂತೆ, ಶಿವಸೇನೆ ಶನಿವಾರದಂದು ಕಾಂಗ್ರೆಸ್ ಪಕ್ಷವಿಲ್ಲದೆ ಯುಪಿಎಗೆ ಸಮಾನಾಂತರವಾಗಿ ಮೈತ್ರಿ ರಚಿಸುವುದು ಆಡಳಿತ ಪಕ್ಷ ಬಿಜೆಪಿ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಇನ್ನಷ್ಟು ಅನುಕೂಲ ಮಾಡುತ್ತದೆ ಎಂದು ಅವರು ಹೇಳಿದೆ.
ಇದು 'ನೈಸರ್ಗಿಕ ಹಕ್ಕು' ಅಲ್ಲ, ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಪಕ್ಷವು ಶೇ. 90 ರಷ್ಟು ಚುನಾವಣೆಗಳನ್ನು ಕಳೆದುಕೊಂಡಿದೆ. ಈಗ ಯುಪಿಎ (ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್) ಇಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.
Mamata Banerjee: ರಾಷ್ಟ್ರಗೀತೆಗೆ ಅಗೌರವ (Disrespecting the national anthem) ತೋರಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ವಿರುದ್ಧ ದೂರು ದಾಖಲಾಗಿದೆ.
ದೇಶದ ಒಕ್ಕೂಟ ರಚನೆಯನ್ನು ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗೂಡಿದರೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವುದು ತುಂಬಾ ಸುಲಭ ಎಂದು ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ದೇಶಾದ್ಯಂತ ಬಿಜೆಪಿಯನ್ನು ಮೂಲೆಗುಂಪು ಮಾಡಲು ನಡೆಸಿದ ಸರ್ವಾಂಗೀಣ ಪ್ರಯತ್ನದಲ್ಲಿ, ಅವರು ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ ಸಹಾಯ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದರು.
ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‌ನ ದೊಡ್ಡ ನಾಯಕರನ್ನು ಒಬ್ಬರ ನಂತರ ಒಬ್ಬರುನ್ನು ತೃಣಮೂಲ ಕಾಂಗ್ರೆಸ್ (TMC)ಗೆ ಬರ ಮಾಡಿಕೊಳ್ಳುತ್ತಿದ್ದಾರೆ. ದೇಶಾದ್ಯಂತ ತನ್ನ ನೆಲೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ.