Mangalore : ಸುರಕ್ಷಿತ ರಸ್ತೆಗಳು ಮತ್ತು ಉತ್ತಮ ಸಂಚಾರ ಶಿಸ್ತಿನ ಖಾತರಿಗಾಗಿ ಮಂಗಳೂರು ನಗರದಲ್ಲಿ ಮುಂದಿನ ತಿಂಗಳಿನಿಂದ ಕಠಿಣ ಸಂಚಾರ ಕಾನೂನುಗಳನ್ನು ಜಾರಿಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಇಂದು ಮುಂಜಾನೆ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ತನ್ನ ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲು ತೆರಳಿದ್ದ ವೇಳೆ... ಘಟನೆಯ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಶಾಪಿಂಗ್ ಮಾಡಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಬಾಲಕಿ ನಾಪತ್ತೆಯಾಗಿರುವ ಕುರಿತು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮುಕ್ಕ ಸಮೀಪದ ಮಿತ್ರಪಟ್ನ ಮಾತೃಛಾಯಾ ನಿವಾಸಿ ಸಂತೋಷ ಮತ್ತು ರೇಖಾ ದಂಪತಿಯ ಪುತ್ರಿ ಸ್ಪೂರ್ತಿ (17), ನಾಪತ್ತೆಯಾದ ಬಾಲಕಿ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 11 ಗಂಟೆ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರ ಸಮ್ಮುಖದಲ್ಲಿ ಕಚೇರಿಯಲ್ಲಿ ಶಾಂತಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲೆಯ ಪ್ರಮುಖ ಧಾರ್ಮಿಕ ಮುಖಂಡರು, ಪೊಲೀಸ್ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದೆ. ಇನ್ನು ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ
ಇನ್ನು ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. “ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ” ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.