ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣ ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಎನ್ಐಟಿಕೆ ಬಳಿಯ ಟೋಲ್ ಗೇಟ್ ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟಣೆ ವತಿಯಿಂದ ಇಂದಿನಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ಇದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು ಟೋಲ್ ಗೇಟ್ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಡೇಶ್ವಾಲ್ಯ ಗ್ರಾಮದಿಂದ ಸಿ.ಆರ್ ಝಡ್ ವ್ಯಾಪ್ತಿಯಿಂದ ಪರವಾನಗಿ ಪಡೆದು ಮರಳು ತೆಗೆಯುವ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು, ಕಡೆಶ್ವಾಲ್ಯ ಹಾಗೂ ಬರಿಮಾರು ಗ್ರಾಮಗಳಲ್ಲಿ ನದಿಯಿಂದ ಮರಳನ್ನು ಲೋಡ್ ಮಾಡಲು ವ್ಯವಸ್ಥೆ ಮಾಡಿದ್ದರು.
ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ.
ರಾಜ್ಯಕ್ಕೆ ನರೇಂದ್ರ ಮೋದಿ ಆಗಮನ ಬಿಜೆಪಿಗೆ ಬಲ ತುಂಬಿದ್ರೆ, ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗೆ ಗುರಿಯಾಗಿದೆ. ಪ್ರಧಾನ ಮಂತ್ರಿ ವಿರುದ್ಧ ಟ್ಟೀಟ್ ಪ್ರಹಾರ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳೇ ನಿಮ್ಮ ಭೇಟಿ ವಿಕಾಸಕ್ಕೋ ವಿನಾಶಕ್ಕೋ ಎಂದು ಪ್ರಶ್ನೆ ಮಾಡಿದ್ದಾರೆ.
ಮಂಗಳೂರು ನಗರದ ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್ ವೃತ್ತʼ ಎಂಬ ಹೆಸರಿನ ಅನಧಿಕೃತ ಬ್ಯಾನರ್ ಪ್ರತ್ಯಕ್ಷವಾಗಿದ್ದು ವಿಷ್ಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಅದನ್ನು ತೆರವುಗೊಳಿಸಿದ್ದಾರೆ.
ಸುರತ್ಕಲ್ ನಿಂದ ಕೃಷ್ಣಾಪುರ ಕಡೆ ತಿರುವು ಪಡೆಯುವ ಮೇಲ್ಸೇತುವೆಯ ಅಡಿಯಲ್ಲಿ ಸಾವರ್ಕರ್ ಭಾವಚಿತ್ರ ಹಾಗೂ ಸಾವರ್ಕರ್ ವೃತ್ತ ಎಂಬ ಬ್ಯಾನರನ್ನು ಅಳವಡಿಸಲಾಗಿತ್ತು.
ಬ್ಯಾನರ್ ಅಳವಡಿಸಿರುವ ಸ್ಥಳದಲ್ಲಿ ಪೊಲೀಸರು ಪ್ರತಿದಿನ ರಾತ್ರಿ ಹಗಲು ಗಸ್ತು ನಡೆಸುತ್ತಿದ್ದರು.ಅಲ್ಲದೆ, ಕೆಎಸ್ಸಾರ್ಪಿ ತುಕಡಿಯೊಂದನ್ನು ಇದೇ ಪ್ರದೇಶದಲ್ಲಿ ಇಡಲಾಗಿತ್ತು. ಇಷ್ಟೂ ಬಂದೋಬಸ್ತ್ ಮಾಡಿದ್ರೂ ಹೇಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಆರು ಜಿಲ್ಲೆಯ ಎಸ್ಪಿ, ಎನ್ ಐಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಿದರು. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸಭೆಯ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಕರಾವಳಿ ಜಿಲ್ಲೆಯಲ್ಲಿ ಸರಣಿ ಹತ್ಯೆ ಹಿನ್ನಲೆಯಲ್ಲಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಸುರತ್ಕಲ್, ಪಣಂಬೂರು, ಮುಳ್ಳಿ ಮತ್ತು ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.